ಎಲ್ಲರ ಸಹಕಾರದಿಂದ ನಗರಾಭಿವೃದ್ಧಿ- ಪ್ರಸನ್ನ ಗಡಾದ್
Urban development through everyone’s cooperation – Prasanna Gadad



ಕೊಪ್ಪಳ : ನನಗೆ ನೀಡಿರುವ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಅಧಿಕಾರ ಇದು ಅಧಿಕಾರವಲ್ಲ ಒಂದು ಜವಾಬ್ದಾರಿ ಎಂದು ಪರಿಗಣಿಸುತ್ತೇನೆ. ನಗರಾಭಿವೃದ್ಧಿ ಪ್ರಾಧಿಕಾರದ ಶ್ರೀನಿವಾಸ್ ಗುಪ್ತ ಅವರು ಯೋಜಿಸಿರುವ ಯೋಜನೆಗಳನ್ನು ಕಾಮಗಾರಿಗಳನ್ನು ಎಲ್ಲರ ಸಹಕಾರದೊಂದಿಗೆ ಮುಂದುವರಿಸುತ್ತೇನೆ ಎಂದು ನೂತನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್ ಹೇಳಿದರು
ಅವರು ಇಂದು ನಗರಾಭಿವೃದ್ಧಿ ಪ್ರಾಧಿಕಾರದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿ ನೇಮಕಗೊಳ್ಳಲು ಕಾರಣಿಕರ್ತರಾದ ಶಾಸಕರು ಸಂಸದರು ಸೇರಿದಂತೆ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನನಗೆ ಜವಾಬ್ದಾರಿಯನ್ನು ಕೊಟ್ಟಿದ್ದಾರೆ ಬಹಳ ಜವಾಬ್ದಾರಿಯಿಂದ ಕೊಪ್ಪಳ ನಗರವನ್ನ ಅಭಿವೃದ್ಧಿ ಪಡಿಸುತ್ತೇನೆ ಮತ್ತು ಶ್ರೀನಿವಾಸ್ ಗುಪ್ತ ಅವರು ನಗರದ ಅಭಿವೃದ್ಧಿಗೆ ಏನೆಲ್ಲಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರು ಅವನ್ನು ಎಲ್ಲರ ಸಹಕಾರ ಮಾರ್ಗದರ್ಶನದೊಂದಿಗೆ ಮುಂದುವರಿಸುತ್ತೇನೆ. ಕೊಪ್ಪಳ ನಗರ ಬಹಳ ವೇಗವಾಗಿ ಬೆಳೆಯುತ್ತದೆ ಜೊತೆಗೆ ಜನಸಂಖ್ಯೆಯು ಬೆಳೆಯುತ್ತಿದೆ.
ಇವತ್ತು ಒಳ್ಳೆಯ ಗಾಳಿ ಒಳ್ಳೆಯ ಪರಿಸರ ಬೇಕಾಗಿದೆ. ಒಳ್ಳೆಯ ವಾತಾವರಣ ನಿರ್ಮಾಣ ಮಾಡಬೇಕು. ಶಾಸಕ ರಾಘವೇಂದ್ರ ಹಿಟ್ನಾಳ್ ನಗರವನ್ನು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ ಇವತ್ತು ಶಿಕ್ಷಣ ಕ್ಷೇತ್ರದಲ್ಲಿ ಇರಬಹುದು ಮತ್ತು ನೀರಾವರಿ ಕ್ಷೇತ್ರದಲ್ಲಿ ಕೂಡ ಸಾಕಷ್ಟು ಅನುದಾನ ತಂದಿದ್ದಾರೆ. ಸಾಕಷ್ಟು ಅಭಿವೃದ್ಧಿಯಾಗಿದೆ ಮುಂದಿನ ದಿನಗಳಲ್ಲಿ ನಗರವನ್ನು ಅಭಿವೃದ್ಧಿಗೊಳಿಸುವಲ್ಲಿ ಎಲ್ಲರ ಸಹಕಾರ ಬೇಕಿದೆ ಎಂದು ಹೇಳಿದರು.
ಇದಕ್ಕೂ ಪೂರ್ವದಲ್ಲಿ ಮಾತನಾಡಿದ ನಿಕಟ ಪೂರ್ವ ಅಧ್ಯಕ್ಷ ಶ್ರೀನಿವಾಸ್ ಗುಪ್ತ ತಮ್ಮ ಅಧ್ಯಕ್ಷ ಅವಧಿಯಲ್ಲಿ ಕೈಗೊಂಡ ಕಾರ್ಯ ಚಟುವಟಿಕೆಗಳು ಕುರಿತು ಮಾತನಾಡಿದರು. ಮಾಜಿ ಸಂಸದ ಸಂಗಣ್ಣ ಕರಡಿ ಸಂಸದ ರಾಜಶೇಖರ ಹಿಟ್ನಾಳ್ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಮಾತನಾಡಿದರು.
ವೇದಿಕೆಯ ಮೇಲೆ ನಗರ ಬ್ಲಾಕ್ ಘಟಕದ ಅಧ್ಯಕ್ಷ ಕಾಟನ್ ಪಾಷಾ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಜ್ಯೋತಿ ಗೊಂಡಬಾಳ, ಹಿರಿಯ ಮುಖಂಡರಾದ ಕೆಎಂ ಸೈಯದ್, ಕಿಶೋರಿ ಬೂದನೂರು, ಭಾಗ್ಯನಗರ ಪಟ್ಟಣ ಪಂಚಾಯತ್ ಅಧ್ಯಕ್ಷ ರಮೇಶ್ ಹ್ಯಾಟಿ ಉಪಾಧ್ಯಕ್ಷ ಹೊನ್ನೂರ್ಸಾ ಬೈರಾಪುರ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಯಮನಪ್ಪ ಕಬ್ಬೇರ್ ದಾನಪ್ಪ ಕವಲೂರ್, ತೋಟಪ್ಪ ಕಾಮನೂರ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು, ನಗರ ಸಭೆಯ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸ್ವಾಗತವನ್ನು ಕಾಂಗ್ರೆಸ್ ಸಮಿತಿ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಪ್ರಾಸ್ತಾವಿಕವಾಗಿ ಕೃಷ್ಣ ಗಲಬಿ ಮಾತನಾಡಿದರು. ಪ್ರಾರ್ಥನೆಯನ್ನು ಭಾಷಾ ಕಿನ್ನಾಳ ಹಾಗೂ ಅವರ ತಂಡ ನಡೆಸಿದ್ದು. ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಬೆಂಬಲಿಗರು ಹಾಗೂ ವಿವಿಧ ಮುಖಂಡರು ಆತ್ಮೀಯವಾಗಿ ಸನ್ಮಾನಿಸಿದರು.
Comments are closed.