ಭೀರಪ್ಪ ಅಂಡಗಿ , ಮಲ್ಲಿಕಾರ್ಜುನ ಸಿದ್ನೆಕೊಪ್ಪಗೆ ರಾಜ್ಯ ಪ್ರಶಸ್ತಿಯ ಗರಿ

Get real time updates directly on you device, subscribe now.

ಕೊಪ್ಪಳ: ಇಲ್ಲಿನ ಪ್ರಾಥಮಿಕ ಶಾಲೆಯ ಶಿಕ್ಷಕ, ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರು ಎನಿಸಿಕೊಂಡಿರುವ ಭೀರಪ್ಪ ಅಂಡಗಿ ಅವರಿಗೆ ರಾಜ್ಯಮಟ್ಟದ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ ಮತ್ತು ಶ್ರೀ ಗವಿಸಿದ್ಧೇಶ್ವರ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿದ್ನೆಕೊಪ್ಪ ಅವರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವಿಭಾಗೀಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈಚೆಗೆ ಬಹದ್ದೂರಬಂಡಿ ಶಾಲೆಯ ಮುಖ್ಯ ಶಿಕ್ಷಕರಾಗಿ ಅಲ್ಲಿನ ಮಕ್ಕಳನ್ನು ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಮಡು ಹೋಗಿ ವೈರಲ್ ಆದ ಭೀರಪ್ಪ ಅಂಡಗಿ ಅವರು ಅಲ್ಲಿನ ಶಾಲೆಯನ್ನು ಸಹ ಬಹಳಷ್ಟು ಅಭಿವೃದ್ಧಿಪಡಿಸಿ ಜನರ ಮೆಚ್ಚುಗೆ ಪಡೆದಿದ್ದಾರೆ. ವಿಕಲಚೇತನರ ಸಂಘದ ರಾಜ್ಯಾಧ್ಯಕ್ಷರಾಗಿ ಮತ್ತು ಕೊಪ್ಪಳ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿರುವ ಕ್ರಿಯಾಶೀಲ ಸಂಘಟಕ ಭೀರಪ್ಪ ಅಂಡಗಿ ಅವರಿಗೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬಿಜಾಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ಕೊಡಮಾಡುವ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜನೇವರಿ ೩೧ ರಂದು ಬಿಜಾಪುರ ಜಿಲ್ಲೆ ಮುದ್ದೆಬಿಹಾಳದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಶ್ರೀ ಗವಿಸಿದ್ಧೇಶ್ವರ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿದ್ನೆಕೊಪ್ಪ ಅವರು ಕಳೆದ ಎರಡು ದಶಕಕ್ಕೂ ಅಧಿಕ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಬ್ಯಾಂಕಿAಗ್ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡುವ ಜೊತೆಗೆ ಗ್ರಾಹಕ ಸ್ನೇಹಿ ಬ್ಯಾಂಕ್ ಮಾಡುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಅದರ ಜೊತೆಗೆ ಅವರು ತಮ್ಮ ಓಣಿಯ ಕಾರ್ಯಕ್ರಮಗಳು ಮತ್ತು ಬಸವೇಶ್ವರ ದೇವಸ್ಥಾನದ ಅಭಿವೃದ್ಧಿಯಲ್ಲಿ ಸಹ ಸೇವೆ ಮಾಡಿದ್ದನ್ನು ಪರಿಗಣಿಸಿ ಅವರನ್ನು ಡಾ. ಎಸ್. ಬಾಲಾಜಿ ನೇತೃತ್ವದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲೆಯ ಸಹಯೋಗದಲ್ಲಿ ಕೊಡಮಾಡುವ ಸಂಗೊಳ್ಳಿ ರಾಯಣ್ಣ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರಲ್ಲಿ ಜನೇವರಿ ೨೭ ರಂದು ನಡೆಯುವ ರಾಜ್ಯಮಟ್ಟದ ಯುವ ಜಾತ್ರೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತಿದೆ ಎಂದು ಗೊಂಡಬಾಳ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!