ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರ್‌ರಾಷ್ಟಿçÃಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆಯAತಹ ಯಾವುದಾದರೂ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆಬ್ರವರಿ 20 ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸ: ಯೋಜನಾಧಿಕಾರಿಗಳು, ಚಂದ್ರಿಕಾ ಲೇ ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004, ದೂರವಾಣಿ ಸಂಖ್ಯೆ: 0836-2465490, ಇಲ್ಲಿಗೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸಬೇಕು.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಹಾಗೆಯೇ ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಸಹ ಈ ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8050392209, 7204396275, 9448981944 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.