ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ
ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.ಕರ್ನಾಟಕ ಬಾಲವಿಕಾಸ ಆಕಾಡೆಮಿಯು 2024ನೇ ಸಾಲಿನಲ್ಲಿ (2024 ರ ಜನವರಿ ಇಂದ ಡಿಸೆಂಬರ್) ಹಾಗೂ 2025 ನೇ ಸಾಲಿನಲ್ಲಿ ( 2025ರ ಜನವರಿ ಇಂದ ಡಿಸೆಂಬರ್) ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ ಯನ್ನು ಪ್ರದಾನ ಮಾಡಲು ಉದ್ದೇಶಿಸಿದ್ದು, ಆಯಾ ಸಾಲಿನ ಅವಧಿಯಲ್ಲಿ ಅಂದರೆ ಜನೆವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ, ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುತ್ತದೆ.
ಈ ಎಲ್ಲ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು/ ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಫೆಬ್ರವರಿ 20 ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸ: ಯೋಜನಾಧಿಕಾರಿಗಳು, ಚಂದ್ರಿಕಾ ಲೇ ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004, ದೂರವಾಣಿ ಸಂಖ್ಯೆ: 0836-2465490, ಇಲ್ಲಿಗೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸಬೇಕು.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8050392209, 7204396275, 9448981944 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.