ಫೆಬ್ರವರಿ 3 ರಂದು ಭಾಗ್ಯನಗರದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಫೆಬ್ರವರಿ 3 ರಂದು ಬೆಳಿಗ್ಗೆ 10 ಗಂಟೆಗೆ ಭಾಗ್ಯನಗರ ಪಟ್ಟಣದ ಓಜನಹಳ್ಳಿ ರಸ್ತೆಯಲ್ಲಿರುವ ಜ್ಞಾನಬಂಧು ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಭಾಗ್ಯನಗರದ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಮೇಶ ಹ್ಯಾಟಿ ಅವರು ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಬಾಗಲಕೋಟೆ ಕೃಷ್ಣ ಮೇಲ್ದಂಡೆ ಯೋಜನೆಯ ಭೂಸ್ವಾದಿನ, ಪುನರ್ವಸತಿ ಮತ್ತು ಪುನರನಿರ್ಮಣ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್, ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಆಯುಕ್ತರಾದ ಪಾಂಡ್ವೆ ರಾಹುಲ್ ತುಕಾರಾಮ್, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಕೊಪ್ಪಳ ತಹಶೀಲ್ದಾರ ವಿಠಲ ಚೌಗಲೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣನವರ, ರಾಜ್ಯ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷರಾದ ಬಾಬುಸಾಬ್ ಲೈನ್‌ದಾರ, ಕೊಪ್ಪಳ ಜಿಲ್ಲಾ ಘಟಕದ ಪ್ರೌಢ ಶಾಲಾ ಸಹ ಶಿಕ್ಷಕ ಸಂಘದ ಅಧ್ಯಕ್ಷರಾದ ಮಾರ್ಥಂಡರಾವ್ ದೇಸಾಯಿ, ರಾಜ್ಯದ ಸರಕಾರಿ ಗ್ರೇಡ್–1 ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಮಹಾಂತೇಶ ಜಾಲಿಗಿಡದ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶರಣಗೌಡ ಪಾಟೀಲ, ರಾಜ್ಯ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಉಮೇಶ ಕಂಬಳಿ, ಕೊಪ್ಪಳದ ಪಧವೀದರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಾರುತಿ ಮ್ಯಗಳಮನಿ, ಕೊಪ್ಪಳ ಘಟಕದ ಭೋದಕೇತರ ನೌಕರರ ಸಂಘದ ಅಧ್ಯಕ್ಷರಾದ ಅಣ್ಣಯ್ಯ ಮರದೂರ, ಮುನಿರಾಬಾದ್ ಡಯಟ್ ಉಪನಿರ್ದೇಶಕ ಅನಂತಕುಮಾರ ಎ.ಎಸ್. ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಹಾಗೂ ಮತ್ತಿತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Comments are closed.