ಕಾಟಾಪುರ ಗ್ರಾ. ಪಂ. ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ
ಕಾಟಾಪುರ ಗ್ರಾಮ ಪಂಚಾಯತಿಯಲ್ಲಿ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿಗಳ ಕಡೆ ಅಭಿಯಾನದ ಪ್ರಯುಕ್ತ ಪಂಚಾಯಿತಿ ವ್ಯಾಪ್ತಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಹಿರೇಮಠ ರವರು ಮಾತನಾಡಿ ತಾಲೂಕ ಸಮಿತಿಯು ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.ಸ್ಥಳೀಯ ಮಟ್ಟದಲ್ಲಿ ಯೋಜನೆಗಳ ಕುರಿತು ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು..

ಗ್ಯಾರೆಂಟಿ ಸಮಿತಿಯ ತಾಲೂಕ ಸದಸ್ಯ ಮಂಜುನಾಥ್ ತೇವರಣ್ಣವರ್ ಮಾತನಾಡಿ ಮುಂದಿನ ವಾರದಿಂದ ಪಂಚಾಯಿತಿ ಮಟ್ಟದಲ್ಲಿ ಫಲಾನುಭವಿಗಳೊಂದಿಗೆ ಗ್ಯಾರೆಂಟಿ ಸಂವಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಹಾಗೂ ರಾಜ್ಯ ಸರ್ಕಾರದಿಂದ ವಿನೂತನ ಕಾರ್ಯಕ್ರಮ ಮನೆಗೆ ಐದು ಗ್ಯಾರಂಟಿ-ಮನೆ ಮುಂದೆ ರಂಗೋಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ಪ್ರತಿ ಪಂಚಾಯತಿ ವ್ಯಾಪ್ತಿಯ ಮೂರು ಕಡೆ ರಂಗೋಲಿ ಸ್ಪರ್ಧೆ ಕಾರ್ಯಕ್ರಮ ನಡೆಸಿ ಅತ್ಯುತ್ತಮ ರಂಗೋಲಿ ಬಿಡಿಸಿದ ಮೂವರು ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ಫಾರೂಕ್ ಡಾಲಾಯತ್ ,ನರಸಪ್ಪ ಬಿಂಗಿ,ಹುಸೇನ್ ಕಾಯಿಗಡ್ಡಿ,ಆನಂದ ಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು
Comments are closed.