ಜಾಗೃತಿ, ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

ಕೊಪ್ಪಳ : ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರೀತ್ಯಾ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು
3 ಪರಿಶಿಷ್ಟ ಜಾತಿ, 02 ಪರಿಶಿಷ್ಟ ಪಂಗಡದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಎನ್.ಜಿ.ಓ.ಗಳ 03 ಜನ ಅಧಿಕಾರೇತರ ಸದಸ್ಯರುಗಳನ್ನು ನೇಮಕ ಮಾಡಬೇಕಾಗಿರುತ್ತದೆ.
ಈ ಸಮಿತಿಯನ್ನು ಪುನರ್ ರಚಿಸಬೇಕಾಗಿರುವುದರಿಂದ ಈ ಸದಸ್ಯರ ನೇಮಕಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆದಕಾರಣ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಎನ್.ಜಿ.ಓಗಳ ಆಸಕ್ತ ಸದಸ್ಯರು ಸೆಪ್ಟೆಂಬರ್ 25 ರೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಅವರಿಂದ ಪಡೆದು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬೇಕು ಎಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: