ಸಮಾಜ ಕಲ್ಯಾಣ ಇಲಾಖೆ: ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Get real time updates directly on you device, subscribe now.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27 ನೇ ಸಾಲಿನಲ್ಲಿ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ್ ರಾಂ ರವರ 119 ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್ 14 ರಂದು ಡಾ. ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ.ಜಾತಿ ಮತ್ತು ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ  ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ.

ಆದ್ದರಿಂದ ಅರ್ಹ ಅಭ್ಯರ್ಥಿಗಳು ಪ್ರಶಸ್ತಿಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ/ಯಲಬುರ್ಗಾ/ಕುಷ್ಟಗಿ/ಗಂಗಾವತಿ ರವರ ಕಛೇರಿಗೆ ಮಾರ್ಚ್ 7 ರ ಸಂಜೆ 5.30 ರೊಳಗಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬಂದ ಯಾವುದೇ ಅರ್ಜಿ ಸ್ವೀಕರಿಸುವುದಿಲ್ಲ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!