ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ ಶಂಶಾದ ಬೇಗ್ಂ

ಕನಕಗಿರಿ: 2026ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳಿಗೆ ಆಹ್ವಾನಿಸಲಾಗಿದೆ ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷೆ ಶಂಶಾದ ಬೇಗ್ಂ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಅಧಿಕಾರಿ, ನೌಕರರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ” ನೀಡುವ ಯೋಜನೆಯನ್ನು 2012 ರಿಂದ ಜಾರಿಗೆ ತರಲಾಗಿದೆ.
ಪ್ರಸ್ತುತ 2026 ನೇ ಸಾಲಿನಲ್ಲಿ ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ, ನೌಕರರು ತಮ್ಮ ನಾಮ ನಿರ್ದೇಶನಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
“ಸರ್ವೋತ್ತಮ ಸೇವಾ ಪ್ರಶಸ್ತಿಯ” ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಯಸುವವರು ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮ ನಿರ್ದೇಶನವನ್ನು ವೆಬ್‌ಸೈಟ್ https://dparar.karnataka.gov.in/ ಅಥಾವ https://sarvothamaawards.karnataka.gov.in ಕೊನೆಯ ದಿನಾಂಕ ಫೇಬ್ರುವರಿ 25 ರಂದು ಎಂದು ಪ್ರತಟಣೆಲ್ಲಿ ತಿಳಿಸಿದ್ದಾರೆ.
Comments are closed.