ವಿಶೇಷ ಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನ ವಿತರಣೆ
: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಸರ್‌ಗಳ ಸ್ವಾಸ್ಥ್ಯ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನ (Adapted Vehicle)ಗಳ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಕೊಪ್ಪಳ ಕಾರ್ಖಾನೆ ಮತ್ತು ಬಾಯ್ಲರ್‌ಗಳ ಸ್ವಾಸ್ಥ್ಯ ಇಲಾಖೆಯ ಸಹಾಯಕ ನಿರ್ದೇಶಕ ವಿಜಯಕುಮಾರ ಬಿ., ಗಂಗಾವತಿ ಕಾರ್ಮಿಕ ನಿರೀಕ್ಷಕ ಎಂ.ಅಶೋಕ, ಕೊಪ್ಪಳ ಕಾರ್ಮಿಕ ನಿರೀಕ್ಷಕಿ ಮಂಜುಳಾ ವಿಶ್ವನಾಥ, ಕುಷ್ಟಗಿ ಕಾರ್ಮಿಕ ನಿರೀಕ್ಷಕಿ ನಿವೇದಿತಾ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಇತರೆ ಜನಪ್ರತಿನಿಧಿಗಳು, ವಿಶೇಷ ಚೇತನರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Comments are closed.