ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ 24×7 ಕಂಟ್ರೋಲ್ ರೂಂ ಪ್ರಾರಂಭ

Get real time updates directly on you device, subscribe now.

ಕೊಪ್ಪಳ ಜಿಲ್ಲಾಡಳಿತದ Help Line

ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ 24×7 ಕಂಟ್ರೋಲ್ ರೂಂ ಪ್ರಾರಂಭಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಯಾರಾದರೂ ಇರಾನ್, ಬಹರೈನ್, ಸೌದಿ ಮತ್ತು ಇತರೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಅಥವಾ ಸಂಕಷ್ಟದಲ್ಲಿದ್ದೆರೆ, ಕೂಡಲೇ 24×7 ಸಹಾಯವಾಣಿ ಸಂಖ್ಯೆ: 08539221077 ಗೆ ಸಂಪರ್ಕಿಸಬಹುದು. ಇದಕ್ಕೆ ಕೊಪ್ಪಳ ಜಿಲ್ಲಾಡಳಿತವು ಸ್ಪಂದಿಸಿ ಸಂಕಷ್ಟದಲ್ಲಿ ಸಿಲುಕಿರುವ ಕೊಪ್ಪಳ ಜಿಲ್ಲೆಯ ಜನರನ್ನು ಸರ್ಕಾರದಿಂದ ರಕ್ಷಿಸಲು ಸಹಾಯ ಮಾಡಲಾಗುತ್ತದೆಂದು ಕೊಪ್ಪಳ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!