ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸಲು ಸಂಪೂರ್ಣವಾಗಿ ವಿಫಲ- ನವೀನಕುಮಾರ ಈ ಗುಳಗಣ್ಣವರ

Get real time updates directly on you device, subscribe now.

ಇಂದು ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸಲು ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರ ನೀಡುವ ಯಾವುದೇ ಪರಿಣಾಮಕಾರಿ ಯೋಜನೆಗಳು ಈ ಬಜೆಟ್‌ನಲ್ಲಿ ಕಾಣಿಸುತ್ತಿಲ್ಲ. ವಿದ್ಯಾರ್ಥಿಗಳಲ್ಲಿಯೂ ಕೂಡ ಧರ್ಮ ಆದರದ ಮೇಲೆ ಸೌಲಭ್ಯಗಳನ್ನು ಘೋಷಿಸಿರುವುದು ಖಂಡನಿಯ.

Budget has completely failed to meet the expectations of the common people – Naveen Kumar, this gulagannavara

ಕೊಪ್ಪಳ ದ ಕಾರ್ಖಾನೆ ಗಳ ಕುರಿತು ಆಗುತ್ತಿರುವ ಅನಾಹುತಗಳಿಗೆ ಯಾವುದೇ ಸ್ಪಷ್ಟನೆ ನೀಡಿಲ್ಲ, ಕೃಷ್ಣ ಬಿ ಸ್ಕೀಮ್ ಕೊಪ್ಪಳ ಏತ ನೀರಾವರಿ ಯೋಜನೆ ಕೇವಲ ಘೋಷಣೆ ಗಳಾಗಿ ಉಳಿದಿವೆ.

 

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕೃಷ್ಣಾ ನದಿಯಿಂದ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಸುಮಾರು ₹1900 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನ ಆಗಿಲ್ಲ. ಇತ್ತೀಚಿನ ರಾಜ್ಯ ಬಜೆಟ್‌ನಲ್ಲಿ ಈ ಯೋಜನೆಯ ಪ್ರಗತಿ ಅಥವಾ ಮುಂದಿನ ಅನುದಾನದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಲಾಗಿಲ್ಲ. ಯಲಬುರ್ಗಾ ಭಾಗದ ರೈತರು ಈ ಯೋಜನೆಗೆ ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದರು.

 

ಕೇವಲ ಘೋಷಣೆಗಳು ಮತ್ತು ಭರವಸೆಗಳಿಂದ ಕೂಡಿದ ಈ ಬಜೆಟ್ ರಾಜ್ಯದ ಆರ್ಥಿಕ ಸ್ಥಿತಿಯನ್ನು ಇನ್ನಷ್ಟು ದುರ್ಬಲಗೊಳಿಸುವ ಸಾಧ್ಯತೆ ಇದೆ. ಯುವಕರಿಗೆ ಉದ್ಯೋಗ ಸೃಷ್ಟಿ, ರೈತರ ಸಂಕಷ್ಟ ಪರಿಹಾರ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಅಗತ್ಯವಾದ ಗಂಭೀರ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿಲ್ಲ.

 

 

ನವೀನಕುಮಾರ ಈ ಗುಳಗಣ್ಣವರ

ಬಿಜೆಪಿ ಜಿಲ್ಲಾಧ್ಯಕ್ಷರು ಕೊಪ್ಪಳ

Get real time updates directly on you device, subscribe now.

Comments are closed.

error: Content is protected !!