ಬಜೆಟ್ ನಲ್ಲಿ ಕೊಪ್ಪಳಕ್ಕೆ ಕ್ಯಾನ್ಸರ್ ಆಸ್ಪತ್ರೆ : ಆಡೂರು ಸಂತಸ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ 17ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ, ಈ ಬಾರಿ ಬಜೆಟ್ ನಲ್ಲಿ ಕೊಪ್ಪಳ ಬಳಿ ಮುನಿರಾಬಾದಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡುತ್ತಿರುವುದು ಸಂತಸ ತಂದಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಜಶೇಖರಗೌಡ ಆಡೂರು ತಿಳಿಸಿದ್ದಾರೆ.
ಅವರು ಬಜೆಟ್ ಕುರಿತು ಪ್ರತಿಕ್ರಿಯಿಸಿ ಈ ಬಾರಿ ಕೊಪ್ಪಳ ಜಿಲ್ಲೆಗೆ ಅನೇಕ ಯೋಜನೆಗಳನ್ನು ಘೋಷಿಸಿದ್ದು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಿದೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಘೋಷಿಸಿ ಈ ಬಜೆಟ್ ನಲ್ಲಿ ಎಲ್ಲಾ ವರ್ಗದ ಜನರ ಹಿತವನ್ನು ಕಾಯ್ದಿದ್ದಾರೆ ಎಂದು ತಿಳಿಸಿದ್ದಾರೆ.
Comments are closed.