ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ : ಸುಗ್ರೀವಾ

Get real time updates directly on you device, subscribe now.

On the occasion of International Women’s Day-2026, a felicitation program was held for women serving in Gram Panchayats under Gangavati Assembly constituency (engaged in selfless social service).

ಕೊಪ್ಪಳ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ-2026 ರ ಪ್ರಯುಕ್ತ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ (ನಿಸ್ವಾರ್ಥ ಸಮಾಜಮುಖಿ ಸೇವೆಯಲ್ಲಿ ತೊಡಗಿರುವ) ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು. ಸುಗ್ರೀವಾ ಜನಸೇವಾ ಸಮಿತಿ  ಸಂಸ್ಥಾಪಕ ಅಧ್ಯಕ್ಷ ಬಿ.ಜೆ.ಪಿ.ಮುಖಂಡ ಸಂಗಮೇಶ್ ಸುಗ್ರೀವಾ ಹೇಳಿದರು.

ಅವರು ಶನಿವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳಿಗೆ ಮತ್ತು ನರೇಗಾ ಯೋಜನೆ ಅಡಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಕಾಯಕ ಮಿತ್ರರು ಜಿ.ಕೆ.ಎಂ ಮಹಿಳೆಯರಿಗೆ ಸನ್ಮಾನಿಸಿ ಗೌರವಿಸುವ  ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ,ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 18 ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ,ಗ್ರಾಮ ಕಾಯಕ ಮಿತ್ರರು ಜಿ.ಕೆ.ಎಂ. ಮಹಿಳೆಯರಿಗೆ ಸನ್ಮಾಸಿ ಗೌರವಿಸಲಾಗುವುದು ಎಂದ ಅವರು ಇದೇ ಮಾರ್ಚ್ 9 ರಿಂದ ಕಿನ್ನಾಳ ಗ್ರಾಮದಿಂದ ಆರಂಭಿಸಿ ಇರಕಲಗಡಾ, ಲೇಬಗೇರಿ, ಚಿಲಕಮುಕಿ, ಬಸಾಪಟ್ಟಣ ಸೇರಿದಂತೆ 18 ಗ್ರಾಮ ಪಂಚಾಯಿತಿಗಳಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ನಿಸ್ವಾರ್ಥ ಸೇವೆ ಮಾಡುತ್ತಿರುವ ಮಹಿಳೆಯರಿಗೆ ಸನ್ಮಾನ, ಬಹುಮಾನವನ್ನು ಸಂಸ್ಥೆಯಿಂದ ನೀಡಲಾಗುವುದು ಎಂದರು.

ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ವೆಂಕಟೇಶ್, ಪ್ರಭುಗೌಡ ಪಾಟೀಲ್ ವಕೀಲರು, ರೇವಣಪ್ಪ ಗುಡ್ಲಾನೂರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!