ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ – ಡಾ. ಸುರೇಶ ಬಿ. ಇಟ್ನಾಳ
There should be no negligence in the implementation of the Prime Minister’s 15-point program – Dr. Suresh B. Itnal
): ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳು ಹೆಚ್ಚಿನ ಆದ್ಯತೆ ನೀಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷ್ಯ ಬೇಡ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮವು ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿ ಹಾಗೂ ಬೌದ್ಧ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ರೂಪಿಸಲಾದ ಪ್ರಮುಖ ಯೋಜನೆಯಾಗಿದೆ. ಈ ಯೋಜನೆಗಳಡಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಉಚಿತ ಪರೀಕ್ಷಾ ಪೂರ್ವ ತರಬೇತಿ, ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಆಯಾ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸಾಧಿಸಿರುವ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಕೆಲವು ಇಲಾಖೆಗಳ ಸಾಧನೆ ತೃಪ್ತಿಕರವಾಗಿಲ್ಲವೆಂದು ಸೂಚಿಸಿ, ನಿಗದಿತ ಗುರಿಯಂತೆ ಪ್ರಗತಿ ಸಾಧನೆಗೆ ವಿಳಂಬವಾಗುತ್ತಿರುವ ಯೋಜನೆಗಳನ್ನು ಆದ್ಯತೆ ಮೆರೆಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಕೇವಲ ವರದಿಗಳಲ್ಲೇ ಪ್ರಗತಿ ತೋರಿಸುವುದಕ್ಕಿಂತ ನೆಲಮಟ್ಟದಲ್ಲಿ ಸ್ಪಷ್ಟ ಫಲಿತಾಂಶ ಕಾಣುವಂತೆ ಇಲಾಖೆಗಳ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿಶೇಷ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಿವೇಶನ, ಮನೆಗಳ ಹಂಚಿಕೆ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಯೋಜನೆಗಳು ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಾರುತಿ, ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ನಜೀರಸಾಬ್ ಮೂಲಿಮನಿ, ಮೆಹಬೂಬ್ ಪಾಷಾ ಮಾನ್ವಿ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Koppal: All departments should give top priority to the effective implementation of minority schemes under the Prime Minister’s new 15-point program. District Collector Dr. Suresh B. Itnal instructed the concerned officers that there should be no negligence in the implementation of the schemes.
He spoke while presiding over the progress review meeting of the 3rd quarter (October-2025 to December-2025) of the Prime Minister’s new 15-point programs for the year 2025-26 held at the Koppal District Collector’s office hall on Tuesday.
The Prime Minister’s 15-point program is an important scheme designed for the comprehensive development of minority communities such as Muslim, Jain, Christian, Sikh, Parsi and Buddhist communities. He said that the respective departmental officers should take action to ensure that the benefits of various schemes including scholarships for minority students, free pre-exam training, and loan facilities for self-employment reach the eligible beneficiaries under these schemes.
The Deputy Commissioner, who reviewed the progress achieved so far in Koppal district under the Prime Minister’s new 15-point program, pointed out that the performance of some departments was not satisfactory and immediately took action to the concerned officials to complete the projects that were delayed in achieving the set target on a priority basis. He instructed the officials of the departments to work so that clear results can be seen at the ground level rather than showing progress only in reports.
Special publicity programs should be organized to create awareness among the public about the welfare schemes of minorities. He said that the departmental officials should work in coordination to deliver the facilities of various departments including site, house allocation, Ganga welfare, self-employment schemes to the deserving ones.
The meeting was attended by District Minority Welfare Department District Officer Ajmir Ali, District Labor Officer Sudha Garaga, District Lead Bank Manager Maruti, nominated members of the District Level Implementation Committee of the Prime Minister’s 15-Point Program Nazirasab Moolimani, Mehboob Pasha Manvi and others, as well as taluk officers and staff of various departments and the Minority Welfare Department.
Comments are closed.