ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ನಿಧನ

Get real time updates directly on you device, subscribe now.


ಕೊಪ್ಪಳ: ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ (೬೧) ಸೋಮವಾರ ಬೆಳಗಿನ ಜಾವ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಹಲವು ತಿಂಗಳುಗಳಿAದ ಬಹುಅಂಗಾAಗಗಳ ವೈಫಲ್ಯದ ಸಮಸ್ಯೆ ಎದುರಿಸುತ್ತಿದ್ದರು.ಮೃತರಿಗೆ ಪತ್ನಿ, ಮೂವರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ಸ್ವಂತ ಊರಾದ ಕೊಪ್ಪಳ ತಾಲ್ಲೂಕಿನ ಯಲಮಗೇರಿ ಗ್ರಾಮದಲ್ಲಿ ಮಂಗಳವಾರ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಅವರ ಪುತ್ರ ಮಹಾಂತೇಶ ಸಂಗಟಿ ತಿಳಿಸಿದ್ದಾರೆ
ಕರಿಯಣ್ಣ ಸಂಗಟಿ ೧೯೮೨ರಿಂದ ಮೂರು ವರ್ಷ ರಾಯಚೂರು ಜಿಲ್ಲೆಯ ಸೇವಾದಳದ ಸಂಘಟಕರಾಗಿ, ೧೯೮೫ರಿಂದ ೮೯ರ ತನಕ ಕೊಪ್ಪಳ ತಾಲ್ಲೂಕು ಯೂತ್ ಕಾಂಗ್ರೆಸ್ ಪ್ರಮುಖರಾಗಿ, ರಾಯಚೂರು ಜಿಲ್ಲೆಯ ಯೂತ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಕೊಪ್ಪಳ ತಾಲ್ಲೂಕು ಭೂ ಅಭಿವೃದ್ಧಿ ಬ್ಯಾಂಕ್ ಸದಸ್ಯರಾಗಿ, ಕೊಪ್ಪಳ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ, ಕಾಳಿದಾಸ ಪ್ರೌಢಶಾಲೆ ಹಾಗೂ ರಾಜೀವಗಾಂಧಿ ಯುವಕ ಮಂಡಳದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಪಕ್ಷೇತರರಾಗಿ, ೨೦೧೮ರ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಕಾಳಿದಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ, ರಾಜೀವ್ ಗಾಂಧಿ ಯುವ ಮಂಡಲದ ಅಧ್ಯಕ್ಷರಾಗಿ ಹಾಗೂ ಜಿಲ್ಲೆಯ ವಿವಿಧ ಹುದ್ದೆಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದರು.ಕರಿಯಣ್ಣ ಸಂಗಟಿಯವ ನಿಧನಕ್ಕೆ ಜಿಲ್ಲೆಯ ವಿವಿಧ ರಾಜಕೀಯ ಮುಖಂಡರು, ಸಚಿವರು, ಶಾಸಕರು, ಸಂಸದರು ಶೋಕ ವ್ಯಕ್ತಪಡಿಸಿದ್ದಾರೆ.

Former Legislative Council member Kariyanna Sangati passes away

Get real time updates directly on you device, subscribe now.

Comments are closed.

error: Content is protected !!