ವಚನ ಸಾಹಿತ್ಯಕ್ಕೆ ದೇವರ ದಾಸಿಮಯ್ಯನವರ ಕೊಡುಗೆ ಅಪಾರವಾದದ್ದು: ಕರ್ಣಕುಮಾರ
Sri Devara Dasimayya Jayanti Program
ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ
: ವಚನ ಸಾಹಿತ್ಯಕ್ಕೆ ದೇವರ ದಾಸಿಮಯ್ಯನವರ ಕೊಡುಗೆ ಅಪಾರವಾಗಿದ್ದು, ವಚನಗಳ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಿದರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ಹೇಳಿದರು.
ದಾಸಿಮಯ್ಯ ಅವರ ವಚನಗಳು ಸರಳತೆ, ಸಮಾನತೆ ಹಾಗೂ ಭಕ್ತಿ ತತ್ವಗಳನನು ಸಾರುತ್ತವೆ. ಅವರು ಜಾತಿ ಬೇಧವನ್ನು ವಿರೋಧಿಸಿ, ಮಾನವೀಯ ಮೌಲ್ಯಗಳನ್ನು ಉತ್ತೇಜಿಸಿದ ಶ್ರೇಷ್ಠ ವಚನಕಾರರು. ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಅವರು ಹೇಳಿದರು.
ಗಂಗಾವತಿಯ ಮುರಹರಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಸಾಹಿತಿ ಅಮರಮ್ಮ ಕೋಚಿ ಅವರು ದೇವರ ದಾಸಿಮಯ್ಯ ಅವರ ಕುರಿತು ನೀಡಿದ ವಿಶೇಷ ಉಪನ್ಯಾಸದಲ್ಲಿ ದಾಸಿಮಯ್ಯನವರು ಕನ್ನಡದ ಮೊದಲ ವಚನಕಾರರಲ್ಲಿ ಒಬ್ಬರು. ಇವರನ್ನು ವಚನ ಸಾಹಿತ್ಯದ ಆದ್ಯ ವಚನಕಾರ ಎಂದು ಕರೆಯಲಾಗುತ್ತದೆ. ಅಂದಿನ ಕಾಲದ ಜನರಲ್ಲಿದ್ದ ಮೂಢನಂಬಿಕೆ, ಮೇಲು-ಕೀಳು ಎಂಬ ಭೇದಭಾವವನ್ನು ಇವರು ತಮ್ಮ ಸರಳ ಮಾತುಗಳ ಮೂಲಕ ತಿದ್ದಿದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ಗವಿಸಿದ್ದಪ್ಪ ಹಾಗೂ ನೇಕಾರ ಸಮುದಾಯದ ಅಧ್ಯಕ್ಷರಾದ ಶಿವಶಂಕರಪ್ಪ ಚೆನ್ನಿ, ಶಿವಶಂಕರಪ್ಪ ಕರಡಕಲ ಹಾಗೂ ಸಮಾಜ ಬಂಧುಮಿತ್ರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮೊದಲು ನಗರದ ಗೌರಿಶಂಕರ ದೇವಸ್ಥಾನ ಆವರಣದಿಂದ ಸಾಹಿತ್ಯ ಭವನದವರೆಗೆ ಶ್ರೀ ದೇವರ ದಾಸಿಮಯ್ಯ ಅವರ ಭಾವಚಿತ್ರದ ಮೆರವಣಿಗೆ ಜರುಗಿತು.
Sri Devara Dasimayya Jayanti Program
Comments are closed.