ಡಾ.ಬಾಬು ಜಗಜೀವನರಾಮ ಜಯಂತ್ಯುತ್ಸವ: ಜಿಲ್ಲಾಧಿಕಾರಿಗಳು, ಎಸ್ಪಿ ಅವರಿಂದ ಪುಷ್ಪನಮನ

0

Get real time updates directly on you device, subscribe now.

ಕೊಪ್ಪಳ ಏಪ್ರೀಲ್ 05 :  ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ
ಜಯಂತ್ಯುತ್ಸವ ಹಿನ್ನೆಲೆಯಲ್ಲಿ, ಏಪ್ರೀಲ್ 05ರಂದು ಶ್ರೀ ಶಿವಶಾಂತವೀರ ನಗರದಲ್ಲಿನ
ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿ, ಡಾ.ಬಾಬು ಜಗಜೀವನರಾಮ ಪುತ್ಥಳಿಗೆ ಜಿಲ್ಲಾಧಿಕಾರಿಗಳಾದ ಸುರೇಶ ಬಿ. ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ಎಲ್ ಅರಸಿದ್ದಿ ಅವರು ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ನಗರಸಭೆ ಪೌರಾಯುಕ್ತರಾದ ವೆಂಕಟೇಶ ನಾಗನೂರ, ತಹಸೀಲ್ದಾರ ಬಸವರಾಜ ತನ್ನಳ್ಳಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ
ದುಂಡಪ್ಪ ತುರಾದಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಅಜ್ಜಪ್ಪ ಸೊಗಲದ, ವಿವಿಧ ಸಂಘಟನೆಗಳ‌ ಮುಖಂಡರು ಮತ್ತು ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಕಚೇರಿ ಸಿಬ್ಬಂದಿ ಹಾಗೂ ಇತರರು ಇದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!