ವಿದ್ಯಾನಿಕೇತನ ಪಿ.ಯು. ವಿದ್ಯಾರ್ಥಿಗಳ ಅಮೋಘ ಫಲಿತಾಂಶ
ರಾಜ್ಯಮಟ್ಟದ 2 ಮತ್ತು 3ನೇ ರ್ಯಾಂಕ್ ಗಳ ಸಾಧನೆ
ಗಂಗಾವತಿ: ಏಪ್ರಿಲ್ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಪ್ರಕಟಿಸಿದ್ದು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶ್ರೀರಾಮನಗರ, ವಡ್ಡರಹಟ್ಟಿ ಹಾಗೂ ಗಂಗಾವತಿಯ ಶ್ರೀ ವಿದ್ಯಾನಿಕೇತನ ಪಿ.ಯು. ಕಾಲೇಜ್ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ.
ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 1774 ವಿದ್ಯಾರ್ಥಿಗಳಲ್ಲಿ 1767 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 99.60 ರಷ್ಟು ಫಲಿತಾಂಶವನ್ನು ಸಾಧಿಸಿದ್ದು, 1463 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 295 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ ಯು. ಶ್ರಾವಣಿ 600ಕ್ಕೆ 598 ಅಂಕಗಳನ್ನು ಪಡೆಯುವ ಮೂಲಕ ಆಮೋಘ ಸಾಧನೆಗೈದು ರಾಜ್ಯಮಟ್ಟದಲ್ಲಿ 2ನೇ ರ್ಯಾಂಕ್ ಗಳಿಸಿದ್ದಾಳೆ. ಅದೇ ರೀತಿ ಕುಮಾರ ಅರ್ಜುನ್ ಗ್ವಾಟಗಿ 600ಕ್ಕೆ 597 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ 3ನೇ ರಾಂಕ್ ಪಡೆದಿದ್ದು, ಕುಮಾರಿ ವೈಷ್ಣವಿ 600ಕ್ಕೆ 595 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ 5ನೇ ಬ್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮ ಸಾಧನೆಗೈದಿದ್ದಾರೆ.

ಅದೇ ರೀತಿ ವಾಣಿಜ್ಯ ವಿಭಾಗದಲ್ಲಿ ಕುಮಾರಿ ವಂದನಾ ಜೈನ್ 600ಕ್ಕೆ 594 ಅಂಕಗಳನ್ನು ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ 7ನೇ ಯಾಂಕ್ ಗಳಿಸುವ ಮೂಲಕ ಅತ್ಯುತ್ತಮ ಸಾಧನೆಯನ್ನು ಗೈದಿದ್ದಾಳೆ.

ಕಲ್ಯಾಣ ಕರ್ನಾಟಕ ಶಿಕ್ಷಣದಲ್ಲಿ ಹಿಂದುಳಿದಿದೆ ಎಂಬ ಹಣೆಪಟ್ಟಿಯನ್ನು ತೊಲಗಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ಶ್ರೀ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯು ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ರಾಜ್ಯಮಟ್ಟದ ಅತ್ಯುನ್ನತ್ತ ಬ್ಯಾಂಕ್ಗಗಳನ್ನು ಪಡೆದು ಅಮೋಘ ಸಾಧನೆಯನ್ನು ಗೈದಿದೆ.
ಸತತ ಉತ್ತಮ ಫಲಿತಾಂಶ ದಾಖಲಿಸುವ ಮೂಲಕ ಶ್ರೇಷ್ಠ ಸಾಧನೆ ಮಾಡಿದ ಎಲ್ಲ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬು ಅವರು ಹೃತ್ತೂರ್ವಕವಾಗಿ ಅಭಿನಂದಿಸಿದ್ದಾರೆ. ಅದೇ ರೀತಿ ಸೂಕ್ತ ಮಾರ್ಗದರ್ಶನ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಜಗನ್ನಾಥರಾವ್, ಮಲ್ಲಿಕಾರ್ಜುನ್, ಉಮಾಶಂಕರ್, ಅಭಿಷೇಕ್ ಡಿ.ಎಮ್ ಅವರನ್ನು ಹಾಗೂ ಉಪನ್ಯಾಸಕವೃಂದವನ್ನು ಅಭಿನಂದಿಸಿ, ಉತ್ತಮ ಸಹಕಾರ ಹಾಗು ಪ್ರೋತ್ಸಾಹ ನೀಡಿದ ಎಲ್ಲ ಪಾಲಕರಿಗೆ, ಸಮಾಜದ ಗುರು-ಹಿರಿಯರಿಗೆ, ಮಾಧ್ಯಮ ಮಿತ್ರರಿಗೆ ಸಂಸ್ಥೆಯ ಅಧ್ಯಕ್ಷರು ಧನ್ಯವಾದಗಳನ್ನು ತಿಳಿಸಿದರು.
Comments are closed.