ಜೆಡಿಎಸ್ ಮಹಿಳಾ ಘಟಕದಿಂದ ಮಂಗಳವಾರ ಪ್ರತಿಭಟನೆ

ಕೊಪ್ಪಳ: ಮಹಿಳಾ ಮೀಸಲಾತಿ ವಿಧೇಯಕ (ನಾರಿಶಕ್ತಿ ವಂದನ್) ಮಸೂದೆಗೆ ಲೋಕಸಭೆಯಲ್ಲಿ ಸೋಲುಂಟಾದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಮಂಗಳವಾರ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜಿಸಿದೆ ಎಂದು ಪಕ್ಷದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ವಿಫಲಗೊಳಿಸಿದ್ದವು. ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಃ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಮಹಿಳಾ ದಮನಕಾರಿ ನೀತಿಯನ್ನು ಪ್ರತಿಭಟಿಸಿ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಬಸವೇಶ್ವರ ವೃತದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.
ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್, ಜಿಲ್ಲಾಧ್ಯಕ್ಷರಾದ ಸುರೇಶ್ ಭೂಮರಡ್ಡಿ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಹಾಜರಿರಲಿದ್ದಾರೆ. ಮಸೂದೆಯ ಅಂಗೀಕಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಆಗಿರುವ ಅನ್ಯಾಯವನ್ನು ಗಮನಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಪಕ್ಷ ವಿನಂತಿಸಿದೆ.
Protest by JDS women’s unit on Tuesday