ಕೆ.ರಾಘವೇಂದ್ರ ಹಿಟ್ನಾಳ ರವರಿಗೆ ಈ ಬಾರಿ ಸಚಿವ ಸ್ಥಾನ ನೀಡಲಿ

ಕೊಪ್ಪಳ : ಕೊಪ್ಪಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಮ್ಮ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರರು, ಜನಪ್ರಿಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರಿಗೆ ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದಲ್ಲಿ, ಸಚಿವ ಸಂಪುಟ ವಿಸ್ತರಿಸಿದರೆ, ಪುನರ್ ರಚನೆ ಮಾಡಿದರೆ ಕೆ.ರಾಘವೇಂದ್ರ ಹಿಟ್ನಾಳ್ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ವರಿಷ್ಠರಲ್ಲಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಾಹೇಬರಲ್ಲಿ, ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ , ಕೆಪಿಸಿಸಿ ಎಸ್ ಸಿ ಘಟಕದ ಮಾಧ್ಯಮ ವಕ್ತಾರ ಪರಶುರಾಮ್ ಕೆರೆಹಳ್ಳಿ ಒತ್ತಾಯಿಸಿದ್ದಾರೆ.

ಕೆ.ರಾಘವೇಂದ್ರ ಹಿಟ್ನಾಳ್ ರವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಈ ಅವಧಿಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹಾಗೂ ನಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗದವರಿಗೆ ಏಳಿಗೆಗಾಗಿ ಶ್ರಮಿಸಿದ್ದಾರೆ. ಅಭಿವೃದ್ಧಿ ಹರಿಕಾರರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕು. ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಮಾನಸ ಪುತ್ರ ಎಂದೆ ಹೆಸರುವಾಸಿಯಾಗಿದ್ದಾರೆ, ಇವರು ಜನಪರ ಕಾಳಜಿ ಉಳ್ಳ ಅಪರೂಪದ ಜನನಾಯಕ, ಜನಪ್ರಿಯ ರಾಜಕಾರಣಿಯಾಗಿರುವ ಕೆ.ರಾಘವೇಂದ್ರ ಹಿಟ್ನಾಳ್ ಅವರನ್ನು ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ಕೊಡುವುದರ ಮೂಲಕ ಅವರಿಗೆ ಇನ್ನಷ್ಟು ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಲು, ಜನಪರ ಕೆಲಸ ಮಾಡಲು ಶಕ್ತಿ ತುಂಬಾ ಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ವರಿಷ್ಠರಲ್ಲಿ ಎಸ್ ಸಿ ಘಟಕದ ಜಿಲ್ಲಾಧ್ಯಕ್ಷರಾದ ಗಾಳೆಪ್ಪ ಎಚ್ ಪೂಜಾರ್ ರವರು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೂಳಪ್ಪ ಹಲಗೇರಿ ರವರು, KPCC ಎಸ್ ಸಿ ಘಟಕದ ಮಾಧ್ಯಮ ವಕ್ತಾರಾರು ಪರಶುರಾಮ ಕೆರೆಹಳ್ಳಿ ಹಾಗೂ ಎಸ್ ಸಿ ಘಟಕದ ಎಲ್ಲಾ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.