ಗುರುಶ್ರೀ ಸನ್ಮಾನ ಪ್ರಶಸ್ತಿಗೆ ಬೀರಪ್ಪ ಅಂಡಗಿ ಚಿಲವಾಡಗಿ ಆಯ್ಕೆ

Get real time updates directly on you device, subscribe now.

ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಬಾದಾಮಿಯ ಗುರುಶ್ರೀ ಮನೋಚಾರ್ಯ ಪ್ರತಿಷ್ಠಾನದ ವತಿಯಿಂದ ಗುರುಶ್ರೀ ಮೋನಪ್ಪ ಧರ್ಮಪ್ಪ ಮನೋಚಾರ್ಯ ಇವರ ೧೦೨ನೇ ಜಯಂತೋತ್ಸವ ಹಾಗೂ ೧೯ನೇ ಗುರುಸ್ಮರಣೆ ಕಾರ್ಯಕ್ರಮದ ಅಂಗವಾಗಿ ನೀಡಲಾಗುವ ರಾಜ್ಯ ಮಟ್ಟದ ಗುರುಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ತಾಲೂಕಿನ ಬಹದ್ದೂರಬಂಡಿ ಸರ್ಕಾರಿ ಶಾಲಾ ಮಕ್ಕಳಿಗೆ ಸ್ವಂತ ಖರ್ಚಿನಲ್ಲಿ ವಿಮಾನ ಯಾನ ಪ್ರವಾಸ ಮಾಡಿಸಿರುವುದಕ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಏ.೨೪ ರ ಶುಕ್ರವಾರ ಗದಗ ನಗರದ ಎಂ.ಬಿ.ಹುಯಿಲಗೋಳ ಬಿ.ಎಡ್.ಕಾಲೇಜಿನಲ್ಲಿ ಹಮ್ಮಿಕೊಂಡಿರುವ ೫ ಬಿ.ಎಡ್.ಕಾಲೇಜು ಪ್ರಶಿಕ್ಷಣಾರ್ಥಿಗಳಿಗಾಗಿ ಅಂತರ ಕಾಲೇಜು ಮಟ್ಟದ ಸ್ಪರ್ಧಾತ್ಮಕ ಪ್ರತಿಭಾ ಕಾರಂಜಿ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕರಾದ ಆಕಾಶ ಮನೋಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!