ಪತ್ರಕರ್ತ ಶಿವಾನಂದ ತಗಡೂರು ಅವರಿಗೆ ಬಸವ ಜಯಂತಿಯಲ್ಲಿ ಅಭಿನಂದನೆ

Get real time updates directly on you device, subscribe now.

ಮೈಸೂರಿನ ಕಲಾಮಂದಿರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ಅಭಿನಂದಿಸಿದರು.

 

ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳು ಒಟ್ಟಾಗಿ ಸಂಘಟಿಸಿದ್ದ ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಡಾ.ಎಸ್.ಜಿ.ಸುಶೀಲಮ್ಮ,
ಐಎಎಸ್ ಅಧಿಕಾರಿ ನಿತೇಶ್ ಪಾಟೀಲ್, ಐಪಿಎಸ್ ಅಧಿಕಾರಿ ಸೀಮಾ ಲಾಟ್ಕರ್, ಚಿನ್ನಸ್ವಾಮಿ ವಡ್ಡಗೆರೆ ಸೇರಿದಂತೆ ಒಂಬತ್ತು ಗಣ್ಯರನ್ನು ಪುರಸ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮಿಜಿ, ದೇವನೂರು ಮಠದ ಸ್ವಾಮೀಜಿ,
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಸಿ.ಸೋಮಶೇಖರ್ ಮತ್ತಿತರರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!