ಕರ್ನಾಟಕ ವಿಶ್ವವಿದ್ಯಾಲಯದಿಂದ ಹುಸೇನಸಾಬ ವಣಗೇರಿ ಅವರಿಗೆ ಪಿಎಚ್.ಡಿ ಪದವಿ

Get real time updates directly on you device, subscribe now.

ರಾಜ್ಯಪಾಲರಿಂದ ಪಿಎಚ್.ಡಿ ಪದವಿ ಪ್ರಮಾಣ ಪಡೆದ ಹುಸೇನಸಾಬ

 

ಯಲಬುರ್ಗಾ: ಜಾಗತಿಕ ಮಟ್ಟದಲ್ಲಿ ಭಾರತ ಇಂದು ತೀವ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ದೇಶ. 2047ರ ವೇಳೆಗೆ ಸ್ವಾತಂತ್ರ್ಯ ಬಂದು 100 ವರ್ಷಗಳು ಸಲ್ಲುತ್ತವೆ. ಆ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಬೇಕು ಎಂದು ವಿಶ್ವ ವಿದ್ಯಾನಿಲಯ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಸಿಂಗ್ ಗೆಹಲೋತ್ ಹೇಳಿದರು.
ಕರ್ನಾಟಕ ವಿಶ್ವವಿದ್ಯಾಲಯದ 75ನೇ ಘಟಿಕೋತ್ಸವದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ ಕವಿ ಮತ್ತು ಸಂಶೋಧಕ   ಹುಸೇನಸಾಬ ವಣಗೇರಿ ಅವರು ಪಿಎಚ್.ಡಿ ಪದವಿಯನ್ನು ಸ್ವೀಕರಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಅವರಿಂದ ಪಿಎಚ್.ಡಿ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಿ ಮಾತನಾಡಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸ್ತುತ ಭಾರತ ಅಭಿವೃದ್ಧಿಯಲ್ಲಿ ವಿಶ್ವದಲ್ಲಿ 5ನೇ ಸ್ಥಾನದಲ್ಲಿದ್ದು, 3ನೇ ಸ್ಥಾನಕ್ಕೆ ಬರಬೇಕು. ಇದಕ್ಕೆ ಯುವ ಜನತೆ ಸನ್ನದ್ಧರಾಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಕಾರ್ಯಯೋಜನೆಗಳನ್ನು ರೂಪಿಸುತ್ತಿದ್ದು, ಅವುಗಳು ಅನುಷ್ಠಾನಕ್ಕೆ ಬರುವಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ’ ಎಂದರು.
ಹುಸೇನಸಾಬ ವಣಗೇರಿ ಅವರು ಸಮಾಜ ಕಾರ್ಯ ಅಧ್ಯಯನ ವಿಭಾಗ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಮಂಡಿಸಿದ “ಹೆಲ್ತ್ ಕಂಡಿಷನ್ಸ್ ಆಂಡ್ ಹೆಲ್ತಕೇರ್ ಸರ್ವಿಸಸ್ ಯುಟಿಲೈಜೆಶನ್ ಅಮಂಗ್ ಎಲ್ಡರ್ಲಿ ಪೀಪಲ್ ಲಿವಿಂಗ್ ವಿಥ್ ಕ್ರೋನಿಕ್ ಡಿಸೀಸಸ್” ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿಯನ್ನು ನೀಡಲಾಗಿದೆ. ಇವರಿಗೆ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ರೇಣುಕಾ ಈ. ಅಸಗಿ ಅವರು ಮಾರ್ಗದರ್ಶನ ನೀಡಿದ್ದಾರೆ.
ಸಾಹಿತ್ಯ ಮತ್ತು ಸಂಶೋಧನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹುಸೇನಸಾಬ ವಣಗೇರಿ ಅವರು ಈ ಹಿಂದೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಉತ್ತಮ ಸಂಶೋಧನಾ ವಿದ್ಯಾರ್ಥಿಯಾಗಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಇವರು ಇದುವರೆಗೆ “ಎದೆಗಂಟಿದ ವಿರಹ” ಎಂಬ ಕವನ ಸಂಕಲನ, “ಕಾರ್ಮಿಕ ಕಾನೂನುಗಳ ಅರಿವು” ಹಾಗೂ “ಅಂತರಂಗದ ಬೆಳಕು” ಎಂಬ ಮೂರು ಕೃತಿಗಳನ್ನು ಪ್ರಕಟಿಸಿದ್ದಾರೆ. ಸದ್ಯ ಕರ್ನಾಟಕ ವಿಶ್ವವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ವಿಭಾಗದಲ್ಲಿ ಪೂರ್ಣಕಾಲಿಕ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಾಧ್ಯಾಪಕರಾಗುವ ಕನಸನ್ನು ಹೊಂದಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಪ್ರಧಾನ ಮಾಡಿದ್ದಕ್ಕೆ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ಸ್ನೇಹಿತರು ಹಾಗೂ ಊರಿನ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ. ಮುಧೋಳ ಗ್ರಾಮದಲ್ಲಿ ಪಿಎಚ್.ಡಿ ಪದವಿ ಪಡೆದ ಮೊದಲ ಯುವಕರಾಗಿ ಗುರುತಿಸಿಕೊಂಡಿದ್ದಾರೆ. ಹಲವಾರು ಗಣ್ಯ ವೆಕ್ತಿ ಗಳು ಅಭಿನಂದಿಸಿದರು. ತಾಲೂಕಿನ ಮುಧೋಳ ಗ್ರಾಮದ ಸ್ನೇಹಿತರು ಹಾಗೂ ಗ್ರಾಮದ ಸಾರ್ವಜನಿಕ ರೆಲ್ಲರೂ ಅಭಿನಂದಿಸಿದರು.

Get real time updates directly on you device, subscribe now.

Comments are closed.

error: Content is protected !!