ಕನ್ನಡದ ಕಾಲವಲು ಸಮಿತಿಯಂತೆ ಕಸಾಪ ಕಾರ್ಯನಿರ್ವಹಿಸುತ್ತಿದೆ: ಪಾಟೀಲ್
ಸಂಕಲ್ಪ ಪದವಿ ಕಾಲೇಜಿನಲ್ಲಿ ಕಸಾಪದ ೧೧೨ನೇ ಸಂಸ್ಥಾಪನಾ ದಿನಾಚರಣೆ
ಗಂಗಾವತಿ:
ಕನ್ನಡ ನಾಡು-ನುಡಿಯ ವಿಚಾರ, ನೆಲಕ್ಕೆ ಧಕ್ಕೆಯಾದಾಗ ಕನ್ನಡ ಸಾಹಿತ್ಯ ಪರಿಷತ್ತು ಈ ನಾಡಿನ ಸಮಗ್ರತೆ ಮತ್ತು ಹಿತಾಸಕ್ತಿಗೆ ಅನುಗುಣವಾಗಿ ಕನ್ನಡದ ರಕ್ಷಣೆಗಾಗಿ ಕಾವಲು ಸಮಿತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಹೇಳಿದರು.
ಸಾಹಿತ್ಯ ಪರಿಷತ್ತಿನ ೧೧೨ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಲ್ಲಿನ ವಿಜಯನಗರದಲ್ಲಿರುವ ಸಂಕಲ್ಪ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಿಳಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಡೀ ದೇಶದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಂತ ಮತ್ತೊಂದು ಭಾಷಾ ಪ್ರತಿನಿಧಿಕ ಸಂಸ್ಥೆ ಇಲ್ಲ. ಸಾಹಿತ್ಯ ಪರಿಷತ್ತು ಕೇಲವ ಉದ್ದೇಶಿತ ಚಟುವಟಿಕೆಗೆ ಸೀಮಿತವಾಗದೇ ಕನ್ನಡಿಗರ ಆಸ್ಮಿತೆಯ ಪ್ರತೀಕವಾಗಿ ಕೆಲಸ ಮಾಡುತ್ತಿದೆ ಎಂದು ಪರಿಷತ್ತು ನಟಡೆದು ಬಂದ ದಾರಿಯ ಬಗ್ಗೆ ವಿವರಣೆ ನೀಡಿದರು.
ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ರುದ್ರೇಶ ರ‍್ಹಾಳ್ ಪ್ರಾಸ್ತಾವಿಕವಾಗಿ ಮಾತನಾಡಿ ಪರಿಷತ್ತಿನ ಚಟುವಟಿಕೆಗಳನ್ನು ಜನಸಾಮಾನ್ಯರಿಗೂ ತಲುಪಿಸುವ ಉದ್ದೇಶಕ್ಕೆ ಇಂತಹ ಸಾಹಿತ್ಯಕ ಚಟುವಟಿಕೆಗಳನ್ನು ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ವಿದ್ಯಾರ್ಥಿ ಹಂತದಿAದಲೇ ಸಾಹಿತ್ಯಾಸಕ್ತರನ್ನು ಗುರುತಿಸುವುದು ಅವರಿಗೆ ಪ್ರೋತ್ಸಾಹಿಸುವುದು ನಮ್ಮ ಉದ್ದೇಶ. ಅಲ್ಲದೇ ತೆರೆಮರೆಯಲ್ಲಿರುವ ಸಾಧಕರನ್ನು ಗುರುತಿಸಿ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಪರಿಷತ್ತು ಪ್ರೋತ್ಸಾಹಿಸುತ್ತಿದೆ ಎಂದರು.
ಕನ್ನಡದ ಆಸ್ಮಿತೆ- ಕನ್ನಡ ಸಾಹಿತ್ಯ ಪರಿಷತ್ತು ಎಂಬ ವಿಷಯದ ಬಗ್ಗೆ ರಾಣಿ ಚನ್ನಮ್ಮ ಪ್ರಶಸ್ತಿ ಪುರಸ್ಕೃತೆ ಹಿರಿಯ ಪತ್ರಕರ್ತೆ ಸಿ. ಮಹಾಲಕ್ಷಿö್ಮ ವಿಶೇಷ ಉಪನ್ಯಾಸ ನೀಡಿದರು. ಕಸಾಪದಿಂದ ಸನ್ಮಾನ ಸ್ವೀಕರಿಸಿದ ನಗರಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಕಾಶ್ ಮಾಳೆ ಮಾತನಾಡಿದರು.
ಸಂಕಲ್ಪ ಪದವಿ ಕಾಲೇಜಿನ ಅಧ್ಯಕ್ಷ ಹೇಮಂತರಾಜ್ ಕಲ್ಮಂಗಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸನ್ಮಾನ ಸ್ವೀಕರಿಸಿದ ಟಿಎಚ್‌ಎಂಇ ಬಿಎಡ್ ಕಾಲೇಜಿನ ಪ್ರಾಂಶುಪಾಲ ಕೆ.ಸಿ ಕುಲ್ಕರ್ಣಿ, ಕೇರಳ ರಾಜ್ಯದ ಪತ್ರಕರ್ತರ ಸಂಘದ ಜೆಎಂಡಬ್ಲೂ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ವಿಶ್ವನಾಥ ಬೆಳಗಲ್‌ಮಠ ಮಾತನಾಡಿದರು.
ಕಸಾಪದ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳಾದ ರಮೇಶ ಕುಲಕರ್ಣಿ ಮರಳಿ, ಮಹೇಶ ಸಿಂಗನಾಳ, ಶಿವಾನಂದ ತಿಮ್ಮಾಪುರ, ರಮೇಶ ಬಾಳೇಕಾಯಿ, ವಿರೂಪಾಕ್ಷಪ್ಪ ಸಿರವಾರ, ಮುದೇಗೌಡ ಕೇಸರಹಟ್ಟಿ, ಸಂಕಲ್ಪ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಸಿರಿಗೇರಿ, ಶಿವಾನಂದ ಶಿಳ್ಳೀನ್, ಮಾರುತಿ ಐಲಿ ಇತರರಿದ್ದರು.
ಇದಕ್ಕೂ ಮುನ್ನ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ಮೈಸೂರಿನ ಅರಸ ನಾಲ್ವಡಿ ಕೃಷ್ಣರಾಜ ಒಡೆಯರ್, ಆಗಿನ ದಿವಾನರಾಗಿದ್ದ ಸರ್ ಎಂ. ವಿಶ್ವೇಶರಯ್ಯ, ಮಿರ್ಜಾ ಇಸ್ಮಾಯಿಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
Comments are closed.