ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ ಕಾಯಕಯೋಗಿ ಸಿದ್ದರಾಮೇಶ್ವರ ಪ್ರಶಸ್ತಿ ನೀಡಿ ಗೌರವ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಬೋವಿ ಗುರುಪೀಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಬುಧವಾರ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ .ಎಸ್.ತಂಗಡಗಿ, ಪಶುಸಂಗೋಪನೆ ಸಚಿವ ವೆಂಕಟೇಶ್ ಅವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2025-26ನೇ ಸಾಲಿನ ಕಾಯಕಯೋಗಿ ಸಿದ್ದರಾಮೇಶ್ವರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇನ್ನು ಸಿದ್ದರಾಮೇಶ್ವರರ ಕುರಿತು ಬರೆದಿರುವ ‘ಸಿದ್ದರಾಮ ಬೆಳ್ಳಿ ಕಿರಣ’ ಪುಸ್ತಕವನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾಧು, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ, ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎನ್.ರಂಗಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ.ಮಂಜುನಾಥ್, ನಿರ್ದೇಶಕ ಮಂಜುನಾಥ್ ಸ್ವಾಮಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Comments are closed.