ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ: ಮೇ 10 ರಿಂದ ಮದ್ಯ ಮಾರಾಟ ನಿಷೇಧ
: ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ಜಾತ್ರಾ ಮಹೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 10ರ ಸಂಜೆ 6 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಹುಲಿಗಿ ಹಾಗೂ ಹುಲಿಗಿ ಗ್ರಾಮದ ಸುತ್ತಲಿನ 5 ಕಿ.ಮೀ ವ್ಯಾಪ್ತಿಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.