“ನಮ್ಮ ನದಿ – ನಮ್ಮ ಹೊಣೆ” ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ

0

Get real time updates directly on you device, subscribe now.


ಹುಲಿಗಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ “ನಮ್ಮ ನದಿ – ನಮ್ಮ ಹೊಣೆ” ಎಂಬ ಘೋಷಣೆಯಡಿ ತುಂಗಭದ್ರಾ ನದಿ ತಟದಲ್ಲಿ ಸ್ವಚ್ಛತಾ ಹಾಗೂ ಜಾಗೃತಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.
ಈ ಅಭಿಯಾನದಲ್ಲಿ ಅಂಗಳ ಟ್ರಸ್ಟ್‌ನ ಯುವಜನರು ಹಾಗೂ ವಿಸ್ತಾರ ಸಂಸ್ಥೆಯವರು ಸೇರಿ ನದಿಯನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡರು. ಈ ಸಂದರ್ಭದಲ್ಲಿ ಜ್ಯೋತಿ ಗೊಂಡಬಾಳ್ ರವರು ಸಹ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ಅಲ್ಲದೆ ಸ್ಥಳೀಯ ಪೌರಕಾರ್ಮಿಕರು ಸಹ ಕೈಜೋಡಿಸಿ ಸಹಕರಿಸಿದರು.
ಕಾರ್ಯಕ್ರಮದ ವೇಳೆ “ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ – ಬಟ್ಟೆ ಚೀಲ ಬಳಸಿ”, “ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ”, “ನದಿಗೂ ಜೀವಿಸುವ ಹಕ್ಕಿದೆ” ಎಂಬ ಘೋಷಣೆಗಳ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು. ಜೊತೆಗೆ ಸ್ಥಳೀಯ ಜನರೊಂದಿಗೆ ಸಂವಾದ ನಡೆಸಿ, ನದಿಯನ್ನು ಕೇವಲ ನೀರಿನ ಮೂಲವಾಗಿ ಅಲ್ಲದೆ ದೇವಿಯಷ್ಟೇ ಪೂಜ್ಯವಾಗಿ ಕಾಣಬೇಕು ಎಂಬ ಸಂದೇಶ ನೀಡಲಾಯಿತು.
ತುಂಗಭದ್ರಾ ನದಿ ಇಂದು ಹೆಚ್ಚುತ್ತಿರುವ ಪ್ಲಾಸ್ಟಿಕ್ ಹಾಗೂ ಕಸದ ಸಮಸ್ಯೆಯಿಂದ ತನ್ನ ಸ್ವಚ್ಛತೆಯನ್ನು ಕಳೆದುಕೊಳ್ಳುತ್ತಿರುವುದು ಬೇಸರದ ಸಂಗತಿ. ನದಿ ತೀರದಲ್ಲಿ ಶೌಚಾಲಯ ವ್ಯವಸ್ಥೆಯ ಕೊರತೆ, ಕಸ ವಿಲೇವಾರಿ ವ್ಯವಸ್ಥೆಯ ಅಭಾವ ಹಾಗೂ ಸ್ವಚ್ಛತಾ ಸೌಲಭ್ಯಗಳ ಕೊರತೆ ಪರಿಸರಕ್ಕೆ ಹಾನಿಯಾಗುತ್ತಿರುವುದು ಅಭಿಯಾನದ ವೇಳೆ ಗಮನಿಸಲಾಯಿತು. ಈ ಹಿನ್ನೆಲೆಯಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಯಿತು.
ಈ ಕಾರ್ಯ ಒಂದು ದಿನದ ಅಭಿಯಾನವಾಗಿ ಉಳಿಯಬಾರದು. ಜನರು ಸ್ವಾಭಾವಿಕವಾಗಿ ಸೇರಿಕೊಂಡು ನಿರಂತರವಾಗಿ ಪರಿಸರ ಸಂರಕ್ಷಣೆಯ ಕೆಲಸದಲ್ಲಿ ಭಾಗವಹಿಸಬೇಕು ಎಂಬ ಆಶಯವನ್ನು ಅಂಗಳ ಟ್ರಸ್ಟ್ ವ್ಯಕ್ತಪಡಿಸಿದೆ.
ಪರಿಸರ ಉಳಿಸುವ ಮನೋಭಾವದಿಂದ ಕೈಜೋಡಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಲಾಯಿತು.
ನದಿ, ಪರಿಸರ ಮತ್ತು ಸಮಾಜವನ್ನು ಉಳಿಸುವ ಕೆಲಸ ಒಬ್ಬರಿಂದ ಸಾಧ್ಯವಿಲ್ಲ. ಎಲ್ಲ ಇಲಾಖೆ, ಸಂಘಟನೆಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಕೈಜೋಡಿಸಿದಾಗ ಮಾತ್ರ ನದಿಯನ್ನು ಉಳಿಸಲು ಸಾಧ್ಯ ಎಂಬ ಸಂದೇಶ ಈ ಅಭಿಯಾನದಿಂದ ಹೊರಹೊಮ್ಮಿತು.
“ಹುಲಿಗಿ ಜಾತ್ರಾ ಮಹೋತ್ಸವದಲ್ಲಿ ಆರಂಭವಾದ ಈ ಒಳ್ಳೆಯ ಹೆಜ್ಜೆ ಮುಂದೆಯೂ ನಿರಂತರವಾಗಿ ಮುಂದುವ

Get real time updates directly on you device, subscribe now.

Leave A Reply

Your email address will not be published.

error: Content is protected !!