ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತ ಮುಖಂಡರು ಮತ್ತು ಹೋರಾಟಗಾರರ ಜತೆ ಸುದೀರ್ಘ ಚರ್ಚೆ ಬಳಿಕ ಸೂಕ್ತ ನಿರ್ಧಾರ
ಬೆಂಗಳೂರು, ಜೂನ್ 7- ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ತಮ್ಮನ್ನು ಭೇಟಿ ಮಾಡಿದ ವಿವಿಧ ರೈತ ಮುಖಂಡರ ಜೊತೆ ಮಾತುಕತೆ ನಡೆಸಿದರು. ಕೇಂದ್ರ ಸರ್ಕಾರವು ಕಾರ್ಪೊರೇಟ್ ಕೃಷಿಯನ್ನು ಪರಿಚಯಿಸುವುದರಿಂದ ಶೇ. 85 ಕ್ಕೂ ಹೆಚ್ಚಿನ ಪ್ರಮಾಣದಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೊಂದರೆಯಾಗಲಿದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದರು.
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ನೀತಿ, ನಿಯಮಾವಳಿಗಳ ಕುರಿತು ವಿವರವಾಗಿ ಪ್ರತ್ಯೇಕವಾಗಿ ಚರ್ಚಿಸಲು ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಬಡಗಲಪುರ ನಾಗೇಂದ್ರ, ಚಾಮರಸ ಮಾಲಿ ಪಾಟೀಲ್, ಜಿ.ಸು.ಬೈಯ್ಯಾ ರೆಡ್ಡಿ , ಎಚ್.ಆರ್.ಬಸವರಾಜಪ್ಪ ಸೇರಿದಂತೆ ಹಲವಾರು ಮುಖಂಡರು ನಿಯೋಗದಲ್ಲಿದ್ದರು
Review of anti farmer laws : Chief Minister Siddaramaiah
Appropriate decision to be taken after discussion with farmer leaders and activists
Bengaluru, June 7-
Chief Minister Siddaramaiah said that he will review the amendments to the Land Reforms Act, the APMC Act and the Cattle Slaughter Act.
He held talks with various farmer leaders who met him today.
Farmer leaders expressed concern that the small and very small farmers who constitute more than 85% will be affected due to the the Union Government’s decision to introduce corporate agriculture.
The Chief Minister said that he will hold a separate meeting to discuss in detail the policies and regulations required for the development of the agriculture sector.
Badagalpura Nagendra, Chamarasa Mali Patil, G. Su.Baiyya Reddy, H.R.Basavarajappa and others were present in the delegation.
Comments are closed.