ಸಂಶೋಧನೆ ವೈಜ್ಞಾನಿಕವಾಗಿರಲಿ : ಡಾ. ಎಸ್. ವಿ. ಡಾಣಿ

0

Get real time updates directly on you device, subscribe now.



ಇಂದಿನ ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಆಧಾರಿತ ಯುಗದಲ್ಲಿ ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಿರದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಜವಾಬ್ದಾರಿಯುತ ಕಾರ್ಯವಾಗಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ವಿ. ಡಾಣಿ ಅಭಿಪ್ರಾಯಪಟ್ಟರು.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಪಿಎಂ-ಉಷಾ ಪ್ರಾಯೋಜಕತ್ವ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ “ಸುಧಾರಿತ ಸಂಶೋಧನಾ ಪರಿಕರಗಳು” ಕುರಿತು ಆಯೋಜಿಸಲಾದ ಮೂರು ದಿನಗಳ ರಾಜ್ಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಶೋಧನೆ ಎಂದರೆ ಸತ್ಯವನ್ನು ಅನ್ವೇಷಿಸುವುದು ಮತ್ತು ಹೊಸ ಜ್ಞಾನವನ್ನು ಸಮಾಜಕ್ಕೆ ಪರಿಚಯಿಸುವುದು. ಉತ್ತಮ ಸಂಶೋಧನೆ ಮಾನವ ಕುಲದ ಅಭಿವೃದ್ಧಿಗೆ ಪೂರಕವಾಗುತ್ತದೆ. ಇಂದಿನ ಕಾಲದಲ್ಲಿ ಕೃತಕ ಬುದ್ಧಿಮತ್ತೆ ಸೇರಿದಂತೆ ಆಧುನಿಕ ತಂತ್ರಜ್ಞಾನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಸಂಶೋಧನೆ ನಡೆಸಬೇಕು. ಪ್ರತಿಯೊಬ್ಬರೂ ಸಂಶೋಧನೆಯ ಮೂಲಕ ಸಮಾಜಕ್ಕೆ ವಿಶಿಷ್ಟ ಕೊಡುಗೆ ನೀಡಬೇಕು ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನ ಆನಂದಹಳ್ಳಿ ಮಾತನಾಡಿ, ಇಂದಿನ ಜಗತ್ತಿನಲ್ಲಿ ದತ್ತಾಂಶವೇ ಸಂಪತ್ತು. ಕೃತಕ ಬುದ್ಧಿಮತ್ತೆ ದತ್ತಾಂಶದ ಆಧಾರದ ಮೇಲೆಯೇ ಕಾರ್ಯನಿರ್ವಹಿಸುತ್ತಿದ್ದು, ಸಂಶೋಧಕರು ದತ್ತಾಂಶದ ಮಹತ್ವವನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಡಾ. ವೈ. ಬಿ. ಅಂಗಡಿ ಮಾತನಾಡಿ, ಶಿಕ್ಷಣ ಮತ್ತು ಸಂಶೋಧನೆ ಎರಡು ಜೋಡೆತ್ತುಗಳಿದ್ದಂತೆ. ಸಂಶೋಧನೆಯಲ್ಲಿ ಜ್ಞಾನ, ವಿಶ್ಲೇಷಣೆ ಹಾಗೂ ದತ್ತಾಂಶ ಬಹಳ ಮುಖ್ಯವಾಗಿವೆ. ಆಧುನಿಕ ಸಂಶೋಧನಾ ಪರಿಕರಗಳು ಮತ್ತು ಹೊಸ ಸಾಫ್ಟ್‌ವೇರ್‌ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸಂಶೋಧನೆಯ ಮೂಲಕ ಶಿಕ್ಷಣ ಪದ್ಧತಿಯಲ್ಲಿ ಗುಣಾತ್ಮಕ ಬದಲಾವಣೆ ತರಬೇಕು. ಪ್ರಾಧ್ಯಾಪಕರು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡು ಕಾಲಕ್ಕೆ ತಕ್ಕಂತೆ ತಮ್ಮ ಜ್ಞಾನವನ್ನು ನವೀಕರಿಸಿಕೊಳ್ಳಬೇಕು ಎಂದು ಹೇಳಿದರು.  ಕಾರ್ಯಕ್ರಮದ ಸಂಚಾಲಕರು ಮತ್ತು ಪಿಎಮ್‌ ಉಶಾ ಸಂಚಾಲಕರಾದ ಸುಧಾ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಪ್ರಕಾಶ್ ಗೌಡ ಸ್ವಾಗತಿಸಿದರು. ಇತಿಹಾಸ ವಿಭಾಗದ ಅಧ್ಯಾಪಕಾರದ ವಿಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥರಾದ ಸಂತೋಷಿಕುಮಾರಿ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.           ಉದ್ಘಾಟನೆ ಮುಗಿದ ನಂತರ ಮೊದಲನೇ ತಾಂತ್ರಿಕ ಅಧಿವೇಶನದಲ್ಲಿ ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ರಮೇಶ್ ಕೆ ಅವರು ಎಐ ಯುಗದಲ್ಲಿ ಸಂಶೋಧನೆ ಕುರಿತು ವಿಶೇಷ ಉಪನ್ಯಾಸ ಮಂಡಿಸಿದರು. ಎರಡನೇ ತಾಂತ್ರಿಕ ಅಧಿವೇಶನದಲ್ಲಿ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನ ಆನಂದ ಹಳ್ಳಿ ಅವರು ಸಂಶೋಧನೆ ಕಂಡು ಹಿಡಿಯುವ ಪರಿಕರಗಳು ಕುರಿತು ವಿಷಯ ಮಂಡಿಸಿದರು. 

Get real time updates directly on you device, subscribe now.

Leave A Reply

Your email address will not be published.

error: Content is protected !!