ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

Get real time updates directly on you device, subscribe now.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ಬುಧವಾರ ವಿಧಾನಸೌಧದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದರು.‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ‌ ಆಯೋಗ ಸಿದ್ದಪಡಿಸಿದ
“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ” ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿದರು.

ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಚಲುರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ
ಮಧುಸೂಧನ್ ಆರ್ ನಾಯಕ್ , ಸದಸ್ಯರುಗಳಾದ

ಶಿವಣ್ಣಗೌಡ, ಚಂದ್ರಪ್ಪ ಯಾದವ,
ಪ್ರತಿಭಾ ಕುಳಾಯಿ, ಡಾ.ಸಿ.ಎಂ.ಕುಂದಗೋಳ,
ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ

ಸದಸ್ಯ ಕಾರ್ಯದರ್ಶಿ ದಯಾನಂದ್ ಊರ್ಮಿಳಾ ಬಿ ಆಡಳಿತಾತ್ಮಕ ಕಾರ್ಯದರ್ಶಿ , ಡಿ.ಎನ್.ನಾಯಕ್ ಆಯೋಗದ ವಿಶೇಷ ಸಲಹೆಗಾರರು ಮತ್ತು ಇತರೆ ತಜ್ಞರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಸಮಾಜ ಕಲ್ಯಾಣ ಇಲಾಖೆ ಎಚ್.ಸಿ.ಮಹದೇವಪ್ಪ, ಕೃಷಿ‌ ಸಚಿವ ಚೆಲುವರಾಯಸ್ವಾಮಿ, ಶಾಸಕ ರಾಘವೇಂದ್ರ ಹಿಟ್ನಾಳ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ದಯಾನಂದ ಹಾಗೂ ಇನ್ನಿತರರು‌ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!