SIR ಪ್ರಕ್ರಿಯೆಯ ಸರಿಯಾದ ತಿಳುವಳಿಕೆ ಇಲ್ಲದಿದ್ದರೆ ಅನೇಕ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ: ಅಪ್ಸರ್ ಕೊಡ್ಲಿಪೇಟೆ

0

Get real time updates directly on you device, subscribe now.

ಕೊಪ್ಪಳ , ಜೂನ್ 18: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಎನ್ಯೂಮರೇಷನ್ ಫಾರ್ಮ್ ಭರ್ತಿ ಪ್ರಕ್ರಿಯೆ ಕುರಿತು ಜನರಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವುದು ಅತ್ಯಗತ್ಯವಾಗಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪೂರ್ವ ಸಿದ್ಧತೆ ಅಗತ್ಯವೆಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದ್ದಾರೆ.

ಇಂದು ಕೊಪ್ಪಳಯಲ್ಲಿ ಆಯೋಜಿಸಲಾದ “SIR Enumeration Forms Filling Process” ಕುರಿತ PPT ಆಧಾರಿತ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, SIR ಪ್ರಕ್ರಿಯೆಯ ಸರಿಯಾದ ತಿಳುವಳಿಕೆ ಇಲ್ಲದಿದ್ದರೆ ಅನೇಕ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಎನ್ಯೂಮರೇಷನ್ ಪ್ರಕ್ರಿಯೆಯಲ್ಲಿ ಫಾರ್ಮ್‌ಗಳ ಸರಿಯಾದ ಭರ್ತಿ, ಅಗತ್ಯ ದಾಖಲೆಗಳ ಸಿದ್ಧತೆ ಹಾಗೂ ತಾಂತ್ರಿಕ ತಿಳುವಳಿಕೆ ಬಹುಮುಖ್ಯವಾಗಿದೆ. ಆದ್ದರಿಂದ ಕಾರ್ಯಕರ್ತರು, ಸಮಾಜದ ನಾಯಕರು ಮತ್ತು ಸಾರ್ವಜನಿಕರು ಈ ಪ್ರಕ್ರಿಯೆಯ ಬಗ್ಗೆ ಸಂಪೂರ್ಣ ಅರಿವು ಹೊಂದಿ, ಮನೆಮನೆಗೆ ತೆರಳಿ ಜನರಿಗೆ ಸಹಾಯ ಮಾಡುವಂತೆ ಕರೆ ನೀಡಿದರು.

ಮುಂದುವರೆದು ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ ಅವರು, ಬಿಜೆಪಿ ಸರ್ಕಾರ ಸ್ವಾಯತ್ತ ಸಂಸ್ಥೆಯಾದ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಎಸ್‌ಐಆರ್ (Special Intensive Revision) ಪ್ರಕ್ರಿಯೆಯ ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಎಸ್‌ಐಆರ್ ಪ್ರಕ್ರಿಯೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ಸಿಬ್ಬಂದಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬುದನ್ನು ಉಲ್ಲೇಖಿಸಿದ ಅವರು, ಪಶ್ಚಿಮ ಬಂಗಾಳದಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ‘Logical Discrepancy’ ಎಂಬ ಕಾರಣ ನೀಡಿ ಸುಮಾರು 27 ಲಕ್ಷ ಮತದಾರರನ್ನು ಪಟ್ಟಿಯಿಂದ ಹೊರಗುಳಿಸಿರುವ ವರದಿಗಳು ಗಂಭೀರ ಆತಂಕವನ್ನು ಹುಟ್ಟಿಸುತ್ತವೆ ಎಂದು ಹೇಳಿದರು.

ಭಾರತದಂತಹ ಅನಕ್ಷರಸ್ಥರ ಪ್ರಮಾಣ ಇನ್ನೂ ಹೆಚ್ಚಿನ ದೇಶದಲ್ಲಿ ಎಐ ಆಧಾರಿತ ವಿಧಾನಗಳನ್ನು ಬಳಸುವುದರಿಂದ ಲಕ್ಷಾಂತರ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯವಿದೆ ಎಂದು ಎಚ್ಚರಿಸಿದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ತಕ್ಷಣ ಮಧ್ಯಪ್ರವೇಶಿಸಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ‘Logical Discrepancy’ ಅಂಶವನ್ನು ಕೈಬಿಡುವಂತೆ ಚುನಾವಣಾ ಆಯೋಗವನ್ನು ಆಗ್ರಹಿಸಬೇಕು ಎಂದು ಅವರು ಒತ್ತಾಯಿಸಿದರು.

ಈ ತರಬೇತಿ ಕಾರ್ಯಾಗಾರದಲ್ಲಿ ಪಕ್ಷದ ಆಯ್ದ ಬೂತ್ ಮಟ್ಟದ ಸಹಾಯಕರು (BLA), ನಾಯಕರುಗಳು ಹಾಗೂ ಕೊಪ್ಪಳ ನಗರದ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಕಾರ್ಯಾಗಾರದಲ್ಲಿ SIR ಪ್ರಕ್ರಿಯೆಯ ಸಂಪೂರ್ಣ ವಿವರ, ಎನ್ಯೂಮರೇಷನ್ ಫಾರ್ಮ್ ಭರ್ತಿ ವಿಧಾನ, ಸಾಮಾನ್ಯವಾಗಿ ಎದುರಾಗುವ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳ ಕುರಿತು ಸಮಗ್ರ ಮಾರ್ಗದರ್ಶನ ನೀಡಲಾಯಿತು.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಸೈಯದ ಸಲೀಮ್ ಖಾದ್ರಿ , ಕಾರ್ಯದರ್ಶಿ ಮೊಹಮ್ಮದ್ ಸಾಧಿಕ್, ಜಿಲ್ಲಾ ಉಪಾಧ್ಯಕ್ಷರು ಯೂಸುಫ್ ಮೋದಿ , ಜಿಲ್ಲಾ ಸಂಘಟನ ಕಾರ್ಯದರ್ಶಿ ನಿಜಾಮುದ್ದಿನ ಮೊಳೆಕೊಪ್ಪ, ಜಿಲ್ಲಾ ಸದಸ್ಯರು ಹುಜೂರ್ ಅಹ್ಮದ, ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!