ತುಂಗಭದ್ರಾ ಜಲಾಶಯದ ನೂತನ ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮ: ಸಂಸದರು, ಶಾಸಕರಿಂದ ಅಂತಿಮ ಹಂತದ ಸಿದ್ದತೆ ಪರಿಶೀಲನೆ

0

Get real time updates directly on you device, subscribe now.

 

ಕೊಪ್ಪಳ
): ಜೂನ್ 25ರಂದು ನಡೆಯಲಿರುವ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿದ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲೆಯ ಸಂಸದರಾದ ಕೆ.ರಾಘವೇಂದ್ರ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ರಾಯಚೂರು ವಿಧಾನ ಪರಿಷತ್ ಶಾಸಕರಾದ ಎನ್.ಎಸ್. ಭೋಸರಾಜು ಅವರು ವೇದಿಕೆ ಸ್ಥಳದ ಅಂತಿಮ ಹಂತದ ಸಿದ್ದತೆಯನ್ನು ಪರಿಶೀಲಿಸಿದರು.
ಈ ವೇಳೆ ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ ಹಾಗೂ ವಿಧಾನ ಪರಿಷತ್ ಶಾಸಕರಾದ ಎನ್.ಎಸ್. ಭೋಸರಾಜು ಅವರು ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಇಟ್ನಾಳ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಬಳ್ಳಾರಿ ವಲಯದ ಐಜಿಪಿ ಡಾ.ಪಿ.ಎಸ್. ಹರ್ಷ, ಗಂಗಾವತಿ ಡಿವೈಎಸ್ಪಿ ನ್ಯಾಮಗೌಡ ಹಾಗೂ ಕೊಪ್ಪಳ ಡಿವೈಎಸ್‌ಪಿ ಮುತ್ತಣ್ಣ ಸವರಗೊಳ ಅವರು ವೇದಿಕೆ, ಭದ್ರತಾ ವ್ಯವಸ್ಥೆ, ವಾಹನ ನಿಲುಗಡೆ, ಸಂಚಾರ ನಿರ್ವಹಣೆ, ಕುಡಿಯುವ ನೀರು, ವಿದ್ಯುತ್ ಹಾಗೂ ಸಾರ್ವಜನಿಕರ ಸೌಲಭ್ಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹಾಜರಿದ್ದರು.
ಕಾರ್ಯಕ್ರಮಕ್ಕೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಗಣ್ಯರು ಆಗಮಿಸುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದೆ. ಪೊಲೀಸ್ ಇಲಾಖೆ, ನೀರಾವರಿ ಇಲಾಖೆ, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಈ ಮಹತ್ವದ ಸಮಾರಂಭಕ್ಕೆ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿದ್ದು, ಸುಗಮ ಸಂಚಾರ ಮತ್ತು ಭದ್ರತೆಗೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!