ಕೊಪ್ಪಳದಲ್ಲಿ ‘ಸ್ಮೃತಿ ಸಂಗಮ’ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುಗೆ ಸಮಾರಂಭ ಯಶಸ್ವಿ

Get real time updates directly on you device, subscribe now.

 

ಕೊಪ್ಪಳ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ, ಕೊಪ್ಪಳದಲ್ಲಿ ವಾರ್ಷಿಕೋತ್ಸವ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ “ಸ್ಮೃತಿ ಸಂಗಮ – The Next Chapter” ಕಾರ್ಯಕ್ರಮವು ಬುಧವಾರ ವಿಜೃಂಭಣೆಯಿಂದ ನಡೆಯಿತು.

 

ಕೊಪ್ಪಳ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ, ಕೊಪ್ಪಳದಲ್ಲಿ ವಾರ್ಷಿಕೋತ್ಸವ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ “ಸ್ಮೃತಿ ಸಂಗಮ – The Next Chapter” ಕಾರ್ಯಕ್ರಮವು ಬುಧವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಸಾನ್ನಿಧ್ಯ ವಹಿಸಿ ಉದ್ಘಾಟಿಸಿದ ಮ¤.ಪ್ರ.ಸ್ವಾ. ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ, ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆ ಕರ್ನಾಟಕದ ಕಾರ್ಯಾಧ್ಯಕ್ಷರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ  ಈರೇಶ ಬಿ. ಅಂಚಟಗೇರಿ ವಹಿಸಿ  ಮಾತನಾಡಿ, ಕಾನೂನು ಶಿಕ್ಷಣವು ನ್ಯಾಯ, ನೈತಿಕತೆ ಮತ್ತು ಸಾಮಾಜಿಕ ಬದ್ಧತೆಯ ಸಂಕೇತವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ನಿರಂತರ ಕಲಿಕೆ, ಶಿಸ್ತು ಮತ್ತು ಆತ್ಮವಿಶ್ವಾಸದ ಮೂಲಕ ಉನ್ನತ ಸಾಧನೆಗಳನ್ನು ಮಾಡಬೇಕೆಂದು ಕರೆ ನೀಡಿದರು.

 

ವಿಧಾನ ಪರಿಷತ್ ಸದಸ್ಯರಾದ  ಸುಶೀಲ ನಮೋಶಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿದು ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆಯ ಪರವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಯುವಕರು ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ತಮ್ಮ ಪಾತ್ರವನ್ನು ವಹಿಸಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮಾಜಸೇವಕ ಹಾಗೂ ಕೆ.ಎಸ್. ಆಸ್ಪತ್ರೆಯ ಅಧ್ಯಕ್ಷರಾದ ಡಾ. ಬಸವರಾಜ ಕ್ಯಾವಟರ್ ಅವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು. ಸಭೆಯ ಕಾರ್ಯದರ್ಶಿ  ಎಸ್. ರಾಧಾಕೃಷ್ಣನ್ ಅವರು ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಶ್ರೀಮತಿ ಉಷಾದೇವಿ ಎಸ್. ಹಿರೇಮಠ ಅವರು ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು. ಉಪಪ್ರಾಂಶುಪಾಲರಾದ   ಬಸವರಾಜ ಎಸ್.ಎಂ. ಅವರು ವಂದನಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರು, ಪ್ರಾಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭಾವಪೂರ್ಣ ಬೀಳ್ಕೊಡುಗೆ ನೀಡಲಾಯಿತು.

Get real time updates directly on you device, subscribe now.

Comments are closed.

error: Content is protected !!