ಕುಕನೂರು, ಮಂಗಳೂರಿನಲ್ಲಿ ಆರೋಗ್ಯ ಮೇಳ: ಡಿ.ಹೆಚ್.ಓ ಭೇಟಿ

Get real time updates directly on you device, subscribe now.

 ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಕುಕನೂರು ಹಾಗೂ ಮಂಗಳೂರಿನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸೆಪ್ಟೆಂಬರ್ 26ರಂದು ಆಯುಷ್ಮಾನ್ ಭವ: ಆರೋಗ್ಯ ಮೇಳ ನಡೆಯಿತು.

ಆರೋಗ್ಯ ಮೇಳಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಲಿಂಗರಾಜು ಟಿ ಅವರು ಭೇಟಿ ನೀಡಿ, ಸಾರ್ವಜನಿಕರ ಆರೋಗ್ಯ ತಪಾಸಣೆ ಕಾರ್ಯವನ್ನು ವೀಕ್ಷಿಸಿದರು. ಇದೇ ವೇಳೆ ಮಾತನಾಡಿದ ಅವರು, ಈ ಕಾರ್ಯಕ್ರಮ ಸಾರ್ವಜನಿಕರಿಗೆ ಅತಿ ಮಹತ್ವದ ಕಾರ್ಯಕ್ರಮವಾಗಿದ್ದು, ಈ ಮೇಳದಲ್ಲಿ ತಾಯಿ ಮಕ್ಕಳ ಆರೋಗ್ಯ ಕಾರ್ಯಕ್ರಮ, ಆಯುಷ್ಮಾನ್ ಭವ ಆರೋಗ್ಯ ಕಾರ್ಡ್ ವಿತರಣೆ, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ಖಾಯಿಲೆಗಳ ಬಗ್ಗೆ, ಕಣ್ಣಿನ ತೊಂದರೆ, ಚರ್ಮ ಖಾಯಿಲೆ, ಇತರೆ ಖಾಯಿಲೆಗಳ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಎಲ್ಲಾ ಕಾರ್ಯಕ್ರಮ ಅನುಷ್ಠನಾಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು, ಕೊಪ್ಪಳ ಮೆಡಿಕಲ್ ಕಾಲೇಜಿನ ತಜ್ಞವೈದ್ಯರು, ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಹಿರಿಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾಕಾರ್ಯಕರ್ತೆಯರು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!