ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸೋನಂ ವಾಂಗ್ಚುಕ್ ಜೀವÀ ರಕ್ಷಣೆಗೆ ಆಗ್ರಹಿಸಿ ಧರಣಿ

0

Get real time updates directly on you device, subscribe now.

 

 

ಕೊಪ್ಪಳ :  ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸೋನಂ ವಾಂಗ್ಚುಕ್ ಅವರ ಜೀವ ರಕ್ಷಣೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೊಪ್ಪಳದ ಸಾಹಿತ್ಯ ಭವನದ ಪಕ್ಕದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಭಾರತದ ಶಿಕ್ಷಣ ವ್ಯವಸ್ಥೆ ಇಂದು ಗಂಭೀರ ಬಿಕ್ಕಟ್ಟಿನಲ್ಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸುತ್ತಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ಆಡಳಿತಾತ್ಮಕ ವೈಫಲ್ಯಗಳು ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಯುವಕರ ಭವಿಷ್ಯವನ್ನು ಅಪಾಯಕ್ಕೆ ದೂಡಿವೆ. ವರ್ಷಗಳ ಕಾಲ ಕಠಿಣ ಪರಿಶ್ರಮ ಪಟ್ಟು ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳ ಕನಸುಗಳು ಕೆಲವರ ಭ್ರಷ್ಟಾಚಾರ ಮತ್ತು ಆಡಳಿತದ ನಿರ್ಲಕ್ಷ್ಯದಿಂದಾಗಿ ನುಚ್ಚುನೂರಾಗುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಆತಂಕಕಾರಿ ಬೆಳವಣಿಗೆಗಳು ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವಾಲಯ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿವೆ  ಈ ಹಿನ್ನೆಲೆಯಲ್ಲಿ ಖ್ಯಾತ ಪರಿಸರ ತಜ್ಞ, ಶಿಕ್ಷಣ ಸುಧಾರಣಾ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರರಾದ  ಸೋನಂ ವಾಂಗ್ಚುಕ್ ಅವರು ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ಭವಿಷ್ಯಕ್ಕಾಗಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರೂ ಕೇಂದ್ರ ಸರ್ಕಾರ ಮೌನ ವಹಿಸಿರುವುದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಧ್ವನಿಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯವಾಗಿದೆ. ಆದರೆ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎತ್ತಿರುವ ಹೋರಾಟಗಾರರೊಂದಿಗೆ ಸಂವಾದ ನಡೆಸುವ ಬದಲು ಅವರನ್ನು ನಿರ್ಲಕ್ಷಿಸುವ ಧೋರಣೆ ಅಧಿಕಾರದ ಅಹಂಕಾರವನ್ನು ಪ್ರತಿಬಿಂಬಿಸುತ್ತದೆ. ಆದ್ದರಿಂದ ಮೂಲಕ ಕೇಂದ್ರ ಸರ್ಕಾರಕ್ಕೆ ಈ ಕೆಳಕಂಡAತೆ ನಿರ್ದೇಶನ ನೀಡಬೇಕು ಎಂದು ರಾ಼ಷ್ಟçಪತಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಲಾಗಿದೆ

ಸೋನಂ ವಾಂಗ್ಚುಕ್ ಅವರು ಪರಿಸರ ಸಂರಕ್ಷಣೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ಜೀವ ಕೇವಲ ಒಬ್ಬ ವ್ಯಕ್ತಿಯ ಜೀವವಲ್ಲ, ಅದು ಪ್ರಜಾಪ್ರಭುತ್ವದ ಮೌಲ್ಯಗಳಿಗಾಗಿ ನಡೆಯುತ್ತಿರುವ ಹೋರಾಟದ ಸಂಕೇತವಾಗಿದೆ.   ಕೇಂದ್ರ ಶಿಕ್ಷಣ ಸಚಿವ   ಧರ್ಮೇಂದ್ರ ಪ್ರಧಾನ ಅವರು ಕೂಡಲೇ ರಾಜೀನಾಮೆ ನೀಡಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯ ಕಾರ್ಯವೈಖರಿ, ಪ್ರಶ್ನೆಪತ್ರಿಕೆ ಸೋರಿಕೆಗಳು ಹಾಗೂ ಪರೀಕ್ಷಾ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ವಿದ್ಯಾರ್ಥಿಗಳು ಮತ್ತು ಯುವಜನರು ಮುಂದಿಟ್ಟಿರುವ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣವೇ ಅರ್ಥಪೂರ್ಣ ಸಂವಾದ ಆರಂಭಿಸಬೇಕು. ಸೋನಂ ವಾಂಗ್ಚುಕ್ ಅವರ ಆರೋಗ್ಯ ರಕ್ಷಣೆಗೆ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸಲು ಸಮಗ್ರ ಶಿಕ್ಷಣ ಸುಧಾರಣಾ ಕ್ರಮಗಳನ್ನು ಜಾರಿಗೆ ತರಬೇಕು ಎಂದು ರಾಷ್ಟçಪತಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಿದುರ.

ಈ ಸಂದರ್ಭದಲ್ಲಿ ಹೋರಾಟಗಾರರಾದ ಬಸವರಾಜ್ ಸೂಳಿಬಾವಿ, ಬಿ.ಪೀರಬಾಷಾ, ಬಸವರಾಜ್ ಶೀಲವಂತರ, ಮಂಜುನಾಥ ಗೊಂಡಬಾಳ,  ಶರಣು ಗಡ್ಡಿ, ಎಸ್ ಎ ಗಫಾರ್, ಕಾಶಪ್ಪ ಚಲುವಾದಿ,  ಮಕ್ಬೂಲ್  ಬಸವರಾಜ್ ನರೆಗಲ್ ತುಕಾರಾಮ, ಶಿವಪ್ಪ  ಸೇರಿದಂತೆ ಇತರರು ಉಪಸ್ಥಿತರಿದ್ದರು.  

 

Get real time updates directly on you device, subscribe now.

Leave A Reply

Your email address will not be published.

error: Content is protected !!