ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
): ಮುನಿರಾಬಾದನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಿಂದ 2023-24ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳಿಗೆ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ (National Means-Merit Scholarship-NMMS) ಪರೀಕ್ಷೆಯನ್ನು ಡಿಸೆಂಬರ್ 17ರಂದು ನಡೆಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನಿರ್ಧರಿಸಿದೆ. ಈ ವಿದ್ಯಾರ್ಥಿ ವೇತನ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 04ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯ ಪ್ರಾಂಶುಪಾಲರು ಮತ್ತು ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ಧಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.