ಬೆಂಬಲ ಬೆಲೆ ಯೋಜನೆ: ಸೂರ್ಯಕಾಂತಿ ಖರೀದಿ ಕೇಂದ್ರಗಳ ಪ್ರಾರಂಭ

Get real time updates directly on you device, subscribe now.

 ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ರೂ. 6760 ಗಳಂತೆ ಎಕರೆಗೆ 03 ಕ್ವಿಂಟಾಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 15 ಕ್ವಿಂಟಲ್‌ರಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಸೆಪ್ಟೆಂಬರ್ 19ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸಭೆಯನ್ನು ಜರುಗಿಸಿ, ಕೊಪ್ಪಳ ತಾಲೂಕಿನ ಅಳವಂಡಿ, ಕುಕನೂರು ತಾಲೂಕಿನ ಮಂಡಲಗೇರಿ ಹಾಗೂ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.
*ನೋಡಲ್ ಅಧಿಕಾರಿಗಳ ವಿವರ:* ಸೂರ್ಯಕಾಂತಿ ಖರೀದಿ ಕೇಂದ್ರಗಳಾದ ಅಳವಂಡಿ ಖರೀದಿ ಕೇಂದ್ರಕ್ಕೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಜಿ.ಎಂ ಮರುಳಸಿದ್ದಯ್ಯ ಮೊ.ಸಂ: 8495056203, ಮಂಡಲಗೇರಿ ಹಾಗೂ ಬೇವೂರು, ಈ ಎರಡು ಖರೀದಿ ಕೇಂದ್ರಗಳಿಗೆ ಯಲಬುರ್ಗಾ (ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ಮೊ.ಸಂ: 9902224089, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಪ್ರತಿ ಎಕರೆಗೆ ಗರಿಷ್ಠ 03 ಕ್ವಿಂಟಲ್‌ರಂತೆ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಮಾತ್ರ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ರಾಯಚೂರು ವಿಭಾಗೀಯ ಕಚೇರಿ ಕೊಪ್ಪಳ ಮೊ.ಸಂ: 9591812142, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!
%d bloggers like this: