ಪಠ್ಯದ ಜತೆ ಕ್ರೀಡೆಗಳಿಗೂ ಪ್ರಾಮುಖ್ಯತೆ ನೀಡಬೇಕು: ಹೇಮಲತಾ ನಾಯಕ

Get real time updates directly on you device, subscribe now.

 ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮವು ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 26ರಂದು ನಡೆಯಿತು.
ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ ಅವರು ಕ್ರೀಡಾ ಧ್ವಜಾರೋಹಣ ಹಾಗೂ ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಯುವಜನತೆ ಕ್ರೀಡೆಯಲ್ಲಿ ಭಾಗಿಯಾಗಲು ಆಸಕ್ತಿ ತೋರಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ; ಭಾಗವಹಿಸುವುದು ಅತ್ಯವಶ್ಯಕವಾಗಿದೆ ಎಂದರು.
ಕ್ರೀಡೆಯಲ್ಲಿ ಸಾಧನೆ ಮಾಡಬಹುದು ಎಂಬುವುದಕ್ಕೆ ನಮ್ಮ ದೇಶದ ಇಂದಿನ ಕ್ರೀಡಾಪಟುಗಳೆ ಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗಳಿಗೂ ಪ್ರಮುಖ್ಯತೆ ನೀಡಬೇಕು. ವಲಯ, ತಾಲೂಕು, ಜಿಲ್ಲಾ ಮಟ್ಟದ ಅವಕಾಶಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಅತೀ ಹೆಚ್ಚು ಬಳಸಿಕೊಂಡಿದ್ದು ವಿಶೇಷವಾಗಿದೆ. ಆಟ ಅನ್ನುವುದು ಮಕ್ಕಳಿಗೆ ವಿದ್ಯೆ ಇದ್ದ ಹಾಗೆ. ಮಕ್ಕಳು ಕ್ರೀಡೆಗಳಲ್ಲಿ ಭಾಗಿಯಾಗಿ ಸದೃಢರಾಗಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಮಕ್ಕಳು ಪಾಠದ ಜೊತೆಗೆ ಪ್ರೀತಿಯಿಂದ ಸಂತೋಷದಿAದ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು. ಜೊತೆಗೆ ಕ್ರೀಡೆಯಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದು ಕ್ರೀಡಾ ಪಟುಗಳಿಗೆ ಸಲಹೆ ನೀಡಿದರು.
ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿಗಳಾದ ವಿಠ್ಠಲ ಜಾಬಗೌಡರ ಅವರು ಮಾತನಾಡಿ, ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಪ್ರಥಮ, ದ್ವಿತೀಯ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಾಳುಗಳು ಭಾಗವಹಿಸಿದ್ದಾರೆ. ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಥ್ರೋಬಾಲ್, ಹ್ಯಾಂಡಬಾಲ್, ಹಾಕಿ, ಟೇಬಲ್ ಟೆನ್ನೀಸ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ಹಾಗೂ ಟೆನ್ನೀಸ್, ನೆಟ್‌ಬಾಲ್ ಮತ್ತು ಈಜು ಸ್ಪರ್ಧೆಯನ್ನು ಆಯ್ಕೆ ಕ್ರೀಡೆಗಳಾಗಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಎ.ಬಸವರಾಜ, ತಾಲೂಕಿನ ಕ್ರೀಡಾಧಿಕಾರಿಗಳಾದ ಶರಣಬಸಪ್ಪ ಬಂಡಿಹಾಳ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ವೀರಭದ್ರಯ್ಯ ಪೂಜಾರ, ಕಾರ್ಯದರ್ಶಿ ಬಸವರಾಜ ಹನುಮಸಾಗರ, ಮೋರಾರ್ಜಿ ದೇಸಾಯಿ ವಸತಿ ಶಾಲೆಗಳ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಪುಂಡಲೀಕಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ರೀಡೆಯಲ್ಲಿ ಭಾಗಿಯಾದ ಸಿಇಓ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಗುಂಡು ಎಸೆತ ಸ್ಪರ್ಧಾಳುಗಳೊಂದಿಗೆ ಆಪ್ತವಾಗಿ ಮಾತನಾಡಿ
ಗುಂಡು ಎಸೆಯುವ ಮೂಲಕ ಅವರಿಗೆ ಸ್ಫೂರ್ತಿ ನೀಡಿದರು.
ಸನ್ಮಾನ: 14 ವರ್ಷದೊಳಗಿನ ಬಾಲಕಿಯರ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಕೊಪ್ಪಳ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸಿಇಓ ಅವರು ಅಭಿನಂದಿಸಿದರು. ಇದೇ ವೇಳೆ ಕ್ರೀಡಾಪಟುಗಳಿಗೆ ತರಬೇತಿ ನೀಡಿದ ತರಬೇತುದಾರರಾದ ಸುರೇಶ ಮತ್ತು ಕಮಲ್ ಸಿಂಗ್ ಅವರಿಗೆ ಸನ್ಮಾನಿಸಲಾಯಿತು.
ಆಕರ್ಷಕ ಯೋಗ ಪ್ರದರ್ಶನ: ಯೋಗ ಪ್ರದರ್ಶನದಲ್ಲಿ ರಾಷ್ಟç ಮಟ್ಟಕ್ಕೆ ಆಯ್ಕೆಯಾದ ಕೊಪ್ಪಳದ ಶಾರದಾ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಸುಷ್ಮಾ ಪಾಟೀಲ ಯೋಗಪಟು ಯೋಗ ಕಲೆಯನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದರು.

Get real time updates directly on you device, subscribe now.

Comments are closed.

error: Content is protected !!
%d bloggers like this: