ಕೊಲೆ ಅಪರಾಧಿಗೆ ದಂಡ ಸಹಿತ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಪ್ರಕಟ
): ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕನೂರು ತಾಲ್ಲೂಕಿನ ಬೆಣಕಲ್ ಗ್ರಾಮದ ನಿವಾಸಿ ದೇವೇಂದ್ರಪ್ಪ ಮಲ್ಲಪ್ಪ ಬಡಿಗೇರ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಅದೇ ಗ್ರಾಮದ ನಿವಾಸಿ ಆರೋಪಿ ಶರಣಪ್ಪ ಯಲ್ಲಪ್ಪ ಕರಿಗಾರ ಇವರ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.15,000/- ಗಳ ದಂಡವನ್ನು ವಿಧಿಸಿ ಕೊಪ್ಪಳ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಚಂದ್ರಶೇಖರ ಸಿ. ಅವರು ಜುಲೈ 22 ರಂದು ತೀರ್ಪು ಪ್ರಕಟಿಸಿದ್ದಾರೆ.
ಸಿಮೆಂಟ್ ರಸ್ತೆಯ ಮೇಲೆ ಬಿದ್ದಿದ್ದರಿಂದ ತಲೆಗೆ ಹಾಗೂ ಮೂಗಿಗೆ ತೀವ್ರ ಗಾಯವಾಗಿ ರಕ್ತಸ್ರಾವವಾಗಿದ್ದು, ಚಿಕಿತ್ಸೆಗಾಗಿ ಕುಕನೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ದೇವೇಂದ್ರಪ್ಪ ಅವರು 2020 ರ ಅಕ್ಟೋಬರ್ 18 ರಂದು ಸಂಜೆ 6.45 ಗಂಟೆಗೆ ಮೃತಪಟ್ಟಿದ್ದು, ಈ ಬಗ್ಗೆ ಕುಕನೂರು ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 81/2020 ಕಲಂ: 302, 323, 504, 506 ಐಪಿಸಿ ಅಡಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಸಿ.ಪಿ.ಐ ನಾಗರೆಡ್ಡಿ ಅವರು ತನಿಖೆ ನಡೆಸಿ ಆರೋಪಿಯ ವಿರುದ್ದದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಸುಮಾರು ವರ್ಷಗಳ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ಆರೋಪಿ ಶರಣಪ್ಪ ಯಲ್ಲಪ್ಪ ಕರಿಗಾರ ಈತನ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರಶೇಖರ ಸಿ. ಅವರು ಕಲಂ : 304 ಪಿಟಿ-1 ಐಪಿಸಿ ಅಡಿಯಲ್ಲಿ 7 ವರ್ಷಗಳ ಕಠಿಣ ಶಿಕ್ಷೆ ಹಾಗೂ ರೂ.15,000 ಗಳ ದಂಡ ವಿಧಿಸಿ ಜುಲೈ 22 ರಂದು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಬಂಡಿ ಅಪರ್ಣಾ ಎಂ. ಅವರು ವಾದ ಮಂಡಿಸಿದ್ದರು. ಪ್ರಕರಣದಲ್ಲಿ ಸಾಕ್ಷಿದಾರರನ್ನು ಕುಕನೂರು ಪೊಲೀಸ್ ಠಾಣೆಯ ಸಿಬ್ಬಂದಿ ಅರ್ಜುನ ಸಿಪಿಸಿ-464 ಮತ್ತು ಅಮರೇಗೌಡ ಸಿಪಿಸಿ-502 ಇವರು ಸರಿಯಾದ ಸಮಯಕ್ಕೆ ನ್ಯಾಯಾಲಯಕ್ಕೆ ಹಾಜರು ಪಡಿಸಿ ಸಹಕಾರ ನೀಡಿದ್ದಾರೆ ಎಂದು ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Comments are closed.