SIR ಕೊಪ್ಪಳ ಜಿಲ್ಲೆಯಲ್ಲಿ ಜುಲೈ 28 ರವರೆಗೆ 10,34,582 ಗಣತಿ ನಮೂನೆಗಳ ಡಿಜಿಟಲೀಕರಣ

0

Get real time updates directly on you device, subscribe now.

ಕೊಪ್ಪಳ ಜುಲೈ 28  ): ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 28ರ ಸಂಜೆ 06 ಗಂಟೆಯವರೆಗೆ ಒಟ್ಟು 10,34,582 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬAಧಿಸಿದAತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬAಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಂದ ವಿತರಿಸಲಾಗಿದೆ. ಇಲ್ಲಿವರೆಗೆ ಒಟ್ಟು 10,34,582 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
sir koppal

Get real time updates directly on you device, subscribe now.

Leave A Reply

Your email address will not be published.

error: Content is protected !!