ಏಜ್ಯುಕೇರ್ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Get real time updates directly on you device, subscribe now.

ಕೊಪ್ಪಳ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಪ್ಪಳದ ಏಜ್ಯುಕೇರ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟ ಪೂರ್ವ ರಾಜ್ಯಾಧ್ಯಕ್ಷ ಹಾಗೂ  ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಮತ್ತು ಕೊಪ್ಪಳ ಜಿಲ್ಲಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಹಲಗೇರಿ ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆದರ್ಶಗಳನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಹೇಳಿದರು. ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದ್ದು, ಮಕ್ಕಳು ಉತ್ತಮ ಶಿಕ್ಷಣ ಪಡೆದು ಜವಾಬ್ದಾರಿಯುತ ನಾಗರಿಕರಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನತೆಗೆ ಮತ್ತು ಶಾಲೆಯ ಮುದ್ದುಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ರಾಜು ಬಿ.ಆರ್. ಅವರು ಉಪಸ್ಥಿತರಿದ್ದರು. ಶಾಲೆಯ ವತಿಯಿಂದ ಶಂಭುಲಿಂಗನಗೌಡ ಪಾಟೀಲ ಹಲಗೇರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಲೆಯ ಅಧ್ಯಕ್ಷರಾದ ಡಾ. ಶ್ರೀನಿವಾಸ ಹ್ಯಾಟಿ, ಪ್ರಾಚಾರ್ಯರಾದ ಪ್ರಶಾಂತ ಕುಲಕರ್ಣಿ, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!