ಕೊಪ್ಪಳ ಸಿಟಿ ಹೊರವಲಯದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳ ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿಗಳು

ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಬಿಟ್ನಾಳ ಅವರು ಆಗಸ್ಟ್ 28 ರಂದು ಕೊಪ್ಪಳ ನಗರದ ಹೊರವಲಯದಲ್ಲಿ ಸಂಚರಿಸಿ, ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗಳ ಬಗ್ಗೆ ಸ್ಥಳ ಪರಿಶೀಲಿಸಿದರು.
ಕೊಪ್ಪಳ ನಗರದ ಗದಗ ರಸ್ತೆಯ ಮಳೆಮಲ್ಲೇಶ್ವರ ದೇವಸ್ಥಾನದಿಂದ ಹಿರೆಹಳ್ಳ, ದದೇಗಲ್, ಡಿ-ಮಾರ್ಟ್ ಮಾರ್ಗವಾಗಿ ಬೈಪಾಸ್ ರಸ್ತೆಯವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಮತ್ತು ಮಳೆಮಲ್ಲೇಶ್ವರ ದೇವಸ್ಥಾನದಿಂದ ದದೇಗಲ್ ಮಧ್ಯದಲ್ಲಿ ಬರುವ ಹಿರೆಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳು

ಖುದ್ದು ಭೇಟಿ ನೀಡಿ ಸ್ಥಳ ಪರೀಶಿಲನೆ ಮಾಡಿದರು.
ಬಳಿಕೆ ಜಿಲ್ಲಾಡಳಿತ ಭವನದ ಎದುರುಗಡೆಯ ಅಭಯ್ ಸಾಲ್ವೆಂಟ್ ದಿಂದ ಹೊಸಪೇಟೆ ರಸ್ತೆಯ ಬೈಪಾಸ್ ವರೆಗಿನ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗಳ ಬಗ್ಗೆ ಸ್ಥಳ ಪರಿಶೀಲಿಸಿದರು.
ಈ ಕಾಮಗಾರಿಗಳ ಮುಂದಿನ ಕ್ರಮದ ಬಗ್ಗೆ ತ್ವರಿತವಾಗಿ ಕ್ರಮ ವಹಿಸಲು ಸ್ಥಳದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್.ಹೆಚ್.ಎ.ಐ) ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಗಿರೀಶ್ ಹಾಗೂ ಇತರೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಗತ್ಯವಿರುವ ಜಮೀನನ್ನು ಪಹಣಿಯಲ್ಲಿ ಶೀಘ್ರವಾಗಿ ಇಂದೀಕರಣ ಮಾಡಿ, ಈ ಬಗ್ಗೆ ಅಗತ್ಯ ಮಾಹಿತಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಎಡಿಎಲ್ಆರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಎನ್.ಹೆಚ್.ಎ.ಐ., ಎಡಿಎಲ್ಆರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.