ಜಿ.ಎಚ್.ಜಗದೀಶ್‌ರವರಿಗೆ ನಿವೃತ್ತಿಯ ಬೀಳ್ಕೊಡಿಗೆ ಸಮಾರಂಭ

0

Get real time updates directly on you device, subscribe now.

ಕೊಪ್ಪಳ ಆ೩೦,;- ಇದೇ ತಿಂಗಳ ೩೧ರಂದು ನಿವೃತ್ತಗೊಳ್ಳಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಗದೀಶ್ ಜಿ.ಎಚ್‌ರವರಿಗೆ ಕೊಪ್ಪಳ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಉಪನಾಸಕರ, ಪ್ರಾಚಾರ್ಯರ ಮತ್ತು ಸಕಲ ಸಿಬ್ಬಂದಿಗಳು ಆಗಷ್ಟ್ ೩೦ರಂದು ಜಿಲ್ಲಾ ಆಡಳಿತ ಭವನದ ಸಭಾಂಗಣದಲ್ಲಿ ನಡೆಯುವ ಬೀಳ್ಕೊಡಿಗೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.
ಜಿ.ಎಚ್.ಜಗದೀಶ್‌ರವರು ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಅವಧಿಯಲ್ಲಿ ಕಳೆದ ವರ್ಷ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊಪ್ಪಳ ಜಿಲ್ಲೆಯು ೧೭ನೇ ಸ್ಥಾನ ಪಡೆದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಥಮ ಸ್ಥಾನದಲ್ಲಿತ್ತು. ಜಿಲ್ಲೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ ಸುಸೂತ್ರವಾಗಿ ಕಾರ್ಯನಿರ್ವಹಿಸುವ ಮೂಲಕ ಅವರು ದಕ್ಷತೆ ಮತ್ತು ಪ್ರಮಾಣಿಕತೆಗೆ ಹೆಸರಾಗಿದ್ದರು. ಕಳೆದ ಹತ್ತು ವರ್ಷಗಳಲ್ಲಿ ದೀರ್ಘ ಸೇವೆ ಸಲ್ಲಿಸಿದ ಕೀರ್ತಿಗೆ ಇವರು ಪಾತ್ರರಾಗಿದ್ದಾರೆ. ಈ ಬೀಳ್ಕೊಡಿಗೆ ಸಮಾರಂಭವನ್ನು ಅಪರ ಜಿಲ್ಲಾಧಿಕಾರಿಗಳಾದ ಸಿದ್ಧರಾಮೇಶ್ವರರವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಬಸಪ್ಪ ನಾಗೋಲಿಯವರು ವಹಿಸಿಕೊಳ್ಳಲಿದ್ದಾರೆ. ಜಿಲ್ಲಾ ನ್ಯಾಯದೀಶರಾದ ಮಹಾಂತೇಶ ದರಗದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿನಿರ್ದೇಶಕರಾದ ಮಹಾಲಿಂಗಯ್ಯ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾದ ಸೋಮಶೇಖರಗೌಡ, ಹಿರಿಯ ಪ್ರಾಚಾರ್ಯರುಗಳಾದ ರಾಜಶೇಖರ ಪಾಟೀಲ್, ಎ.ಆರ.ಶಿವಾಂದ, ಡಾ.ರವಿ ಚವ್ಹಾಣ, ಟಿ.ಸಿ.ಶಾಂತಪ್ಪ, ಮಂಜುನಾಥ ಸ್ವಾಮಿ, ಬಸವರಾಜ, ಶಿವಾನಂದ ಮೇಟಿ, ಮತ್ತು ಇಲಾಖೆಯ ಇತರ ಅಧಿಕಾರಿ ವರ್ಗದವರು, ಹಿರಿಯ ಪ್ರಾಚಾರ್ಯರು ಮತ್ತು ಹಿರಿಯ ಉಪನ್ಯಾಸಕರು ವೇದಿಕೆಯ ಮೇಲೆ ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆಂದು ಕೊಪ್ಪಳ ಜಿಲ್ಲೆ ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಹೊಳಗುಂದಿ ಮತ್ತು ಕೋಶಾಧ್ಯಕ್ಷರಾದ ಸಿದ್ಧಲಿಂಗಪ್ಪ ಕೊಟ್ನೆಕಲ್‌ರವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!