ಖಾಸಗಿ ಶಾಲೆಗಳಿಗೆ ಅನುದಾನಕ್ಕೆ ಆಗ್ರಹ : ದಿ.9 ರಿಂದ ಅನಿರ್ದಿಷ್ಟಾವಧಿ ಧರಣಿ

Get real time updates directly on you device, subscribe now.

ಕೊಪ್ಪಳ, ಸೆ.‌04: ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಕೆ.ಕೆ.ಆರ್.ಡಿ.ಬಿ ಅನುದಾನದಲ್ಲಿ ನೆರವು ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 9 ರಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ‘ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾದ ಸುನಿಲ್ ಕುಮಾರ್ ಹುಡುಗಿ ಎಚ್ಚರಿಸಿದ್ದಾರೆ,
ಅವರು ಶುಕ್ರವಾರ ನಗರದಲ್ಲಿರುವ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತ
ಕಲ್ಯಾಣ ಕರ್ನಾಟಕಕ್ಕೆ 371(ಜೆ) ವಿಶೇಷ ಸ್ಥಾನಮಾನ ದೊರೆತು 13 ವರ್ಷಗಳು ಗತಿಸಿದರೂ ರಾಜಕಾರಣಿಗಳು ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಶಿಕ್ಷಣ ಸಂಸ್ಥೆಗಳಿಗೆ ಸಿಗಬೇಕಾದ ಸೂಕ್ತ ಸೌಲಭ್ಯಗಳು ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು,
ಮುಂದುವರೆದು ಮಾತನಾಡಿ
ಪ್ರಮುಖ ಬೇಡಿಕೆ ಗಳಾದ
* ಸರ್ಕಾರಿ ಶಾಲೆಗಳ ಮಾದರಿ ಸೌಲಭ್ಯ: ಕೆ.ಕೆ.ಆರ್.ಡಿ.ಬಿ ಮಂಡಳಿಯಿಂದ ಸರ್ಕಾರಿ ಶಾಲೆಗಳಿಗೆ ನೀಡುತ್ತಿರುವ ಎಲ್ಲ ಸೌಲಭ್ಯ ಹಾಗೂ ವಿವಿಧ ಅನುದಾನಗಳನ್ನು ಖಾಸಗಿ ಅನುದಾನ ರಹಿತ ಶಾಲೆಗಳಿಗೂ ವಿಸ್ತರಿಸಬೇಕು.
* ವೇತನಾನುದಾನ: ಮಹಾರಾಷ್ಟ್ರ ಮಾದರಿಯಲ್ಲಿ 1995ರ ನಂತರ ಆರಂಭವಾದ ಖಾಸಗಿ ಶಾಲೆಗಳಿಗೆ ವೇತನಾನುದಾನ ನೀಡಬೇಕು.
* ಆರ್‌ಟಿಇ ಪ್ರವೇಶ & ಶುಲ್ಕ: 2012ರ ನಿಯಮದಂತೆ ಆರ್‌ಟಿಇ ಅಡಿಯಲ್ಲಿ ಬಡ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶಾವಕಾಶ ಕಲ್ಪಿಸಬೇಕು.
* ಶಾಲಾ ನವೀಕರಣ ಸರಳೀಕರಣ: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳಗೊಳಿಸಬೇಕು.
* ಉಚಿತ ವಿದ್ಯುತ್ & ತೆರಿಗೆ ವಿನಾಯಿತಿ: ಸರ್ಕಾರಿ ಶಾಲೆಗಳಂತೆ ಖಾಸಗಿ ಶಾಲೆಗಳಿಗೂ ಉಚಿತ ವಿದ್ಯುತ್ ಒದಗಿಸಬೇಕು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಬೇಕು.
* ಸ್ವಾಯತ್ತ ಆಯುಕ್ತಾಲಯ: ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತಾಲಯವನ್ನು ಪೂರ್ಣ ಸ್ವಾಯತ್ತತೆಯುಳ್ಳ ಆಯುಕ್ತಾಲಯವನ್ನಾಗಿ ಘೋಷಿಸಬೇಕು.
ಇದೇ ವೇಳೆ, ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಪ್ರತ್ಯೇಕ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆಗೆ ಒಕ್ಕೂಟ ವಿರೋಧ ವ್ಯಕ್ತಪಡಿಸಿದ್ದು, ಇದು ಗ್ರಾಮೀಣ ಭಾಗದ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯ ಎಂದು ತಿಳಿಸಿದೆ.
ತಮ್ಮ ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಈಡೇರಿಸದಿದ್ದರೆ, ಸೆಪ್ಟೆಂಬರ್ 9ರ ಬುಧವಾರದಿಂದ ವಚನ ಹಾಗೂ ತತ್ವಪದ ಗಾಯನದ ಮೂಲಕ ವಿಶಿಷ್ಟ ರೀತಿಯಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸುವುದಾಗಿ ಒಕ್ಕೂಟದ ಅಧ್ಯಕ್ಷರಾದ ಸುನೀಲಕುಮಾರ ಆರ್. ಹುಡಗಿ ಪತ್ರಿಕಾಗೋಷ್ಠಿಯಲ್ಲಿ ಸರಕಾರಕ್ಕೆ ಎಚ್ಚರಿಸಿದ್ದಾರೆ. ಈ ಹೋರಾಟಕ್ಕೆ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ, ರುಪ್ಸಾ , ಕ್ಯಾಮ್ಸ್ ಸೇರಿದಂತೆ ಹಲವು ಶಿಕ್ಷಣ ಮತ್ತು ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಎಂದು ಒಕ್ಕೂಟದ ಅಧ್ಯಕ್ಷ ಸುನಿಲ್ ಕುಮಾರ್ ಹುಡುಗಿ ತಿಳಿಸಿದ್ದಾರೆ,
ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ ಹಾಗೂ ನ್ಯಾಯವಾದಿ ಆರ್ ಬಿ ಪಾನಗಂಟಿ, ತಾಲೂಕ ಅಧ್ಯಕ್ಷ ಶಾಹಿದ್ ಹುಸೇನ್ ತಹಸಿಲ್ದಾರ್ ಪ್ರಕಾಶ್ ಕಲ್ಬುರ್ಗಿ ಸೋಮನಗೌಡ ಪೊಲೀಸ್ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು,

Get real time updates directly on you device, subscribe now.

Comments are closed.

error: Content is protected !!