ಕೊಪ್ಪಳ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು:ಶಾಸಕ ಕೆ. ರಾಘವೇಂದ್ರ ಹಿಟ್ನಾಳ್

ಕೊಪ್ಪಳ ನಗರದ ವಿವಿಧ ವಾರ್ಡ್ ಗಳಲ್ಲಿ ವಿವಿಧ ವಾರ್ಡ್ ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ.
ನಗರದ ಸಮಗ್ರ ಮೂಲಸೌಕರ್ಯ ಹಾಗೂ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಕ್ಷೇತ್ರದಲ್ಲಿ ಹಲವು ಮಹತ್ವದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಮೂಲಕ ನಗರದ ಸಮಗ್ರ ಅಭಿವೃದ್ಧಿಯೊಂದಿಗೆ ಕೊಪ್ಪಳವನ್ನು ಇಡೀ ರಾಜ್ಯದಲ್ಲೇ ನಂಬರ್ ಒನ್ ನಗರವನ್ನಾಗಿ ರೂಪಿಸುವುದು ನಮ್ಮ ಪ್ರಮುಖ ದೂರದೃಷ್ಟಿಯಾಗಿದೆ. ತುಂಗಭದ್ರಾ ಹಿನ್ನೀರಿನಿಂದ ನಗರಕ್ಕೆ ನಿರಂತರ (24×7) ಕುಡಿಯುವ ನೀರು ಪೂರೈಸಲು ಈ ಹಿಂದೆ ರೂ. 64 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿತ್ತು. ಪ್ರಸ್ತುತ ಉದ್ಭವಿಸಿರುವ ತಾಂತ್ರಿಕ ಅಡಚಣೆ ಮತ್ತು ವಿತರಣಾ ಸಮಸ್ಯೆಯನ್ನು ಪರಿಹರಿಸಲು ರೂ. 80 ಕೋಟಿ ಮೊತ್ತದ ನೂತನ ಡಿಪಿಆರ್ ಸಿದ್ಧಪಡಿಸಲಾಗಿದ್ದು, 16,000ಕ್ಕೂ ಹೆಚ್ಚು ಮನೆಗಳಿಗೆ ಹೊಸ ನಳ ಸಂಪರ್ಕ (ಟ್ಯಾಪ್ ಕನೆಕ್ಷನ್) ಕಲ್ಪಿಸುವ ಕಾರ್ಯ ತ್ವರಿತವಾಗಿ ನಡೆಯಲಿದೆ. ಜೊತೆಗೆ ಭಾಗ್ಯನಗರದಲ್ಲಿ ಈಗಾಗಲೇ 7,800 ಮನೆಗಳಿಗೆ ನಳ ಸಂಪರ್ಕ ನೀಡಲಾಗುತ್ತಿದೆ ಎಂದರು.
*ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ: ಈ ಹಿಂದೆ ರೂ. 135 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಿ, ಜಿಲ್ಲಾಸ್ಪತ್ರೆಯ ಸಾಮರ್ಥ್ಯವನ್ನು 450 ರಿಂದ 1000 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲಾಗಿದೆ. ಇದರಿಂದಾಗಿ ಸ್ಥಳೀಯರು ಚಿಕಿತ್ಸೆಗಾಗಿ ಹುಬ್ಬಳ್ಳಿ ಅಥವಾ ಹೊರ ಜಿಲ್ಲೆಗಳಿಗೆ ತೆರಳುವುದು ತಪ್ಪಿದೆ. ಇತ್ತೀಚಿನ ಬಜೆಟ್ನಲ್ಲಿ ಕೊಪ್ಪಳಕ್ಕೆ ಸುಸಜ್ಜಿತ ಕ್ಯಾನ್ಸರ್ ಕೇರ್ ಸೆಂಟರ್ ಮಂಜೂರಾಗಿದ್ದು, ಸುಮಾರು ರೂ. 150 ಕೋಟಿ ಅನುದಾನದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಜಿಲ್ಲೆಯ ಜನರಿಗೆ ಅತ್ಯಂತ ದೊಡ್ಡ ಕೊಡುಗೆಯಾಗಿದೆ ಎಂದು ತಿಳಿಸಿದರು.
ನಮ್ಮ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಇಡೀ ದೇಶದಲ್ಲೇ ಮಾದರಿಯಾಗಿ ಯಶಸ್ವಿಯಾಗಿ ಮನೆ-ಮನಗಳನ್ನು ತಲುಪಿವೆ. ನಮ್ಮ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಮಾಸಿಕ 2,000 ರೂ. ಜಮೆಯಾಗುತ್ತಿದ್ದು, ಮೂರು ವರ್ಷಗಳಲ್ಲಿ ಪ್ರತಿ ಮಹಿಳೆಗೆ ರೂ. 72,000 ದೊರಕಲಿದೆ. ಇದರೊಂದಿಗೆ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಮೂಲಕ ಪ್ರತಿ ಬಡ ಕುಟುಂಬಕ್ಕೆ ತಿಂಗಳಿಗೆ ಸರಾಸರಿ ರೂ 4,000 ದಿಂದ ರೂ. 5,000 ವರೆಗೆ ಆರ್ಥಿಕ ನೆರವು ತಲುಪುತ್ತಿದೆ ಎಂದು ಹೇಳಿದರು.
ಕೊಪ್ಪಳದಲ್ಲಿ ಶಿಕ್ಷಣ ಮತ್ತು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಹಾಸ್ಟೆಲ್ಗಳು, ಮೊರಾರ್ಜಿ ದೇಸಾಯಿ ಶಾಲೆಗಳು, ಅಂಗನವಾಡಿಗಳು, ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಆದ್ಯತೆ ನೀಡಲಾಗಿದೆ. ಜೊತೆಗೆ ಸಿಂಗಟಾಲೂರು ಏತ ನೀರಾವರಿ, ನವಲಿ ಬ್ಯಾರೇಜ್ ಸೇರಿದಂತೆ 1,100 ಕೋಟಿ ರೂ. ವೆಚ್ಚದಲ್ಲಿ ಸುಮಾರು 1 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಐತಿಹಾಸಿಕ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಕೊಪ್ಪಳ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜ್ ನಲ್ಲಿ 1.47 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ 6 ಕೊಠಡಿಗಳ ಉದ್ಘಾಟನೆಯನ್ನು ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಉದ್ಘಾಟಿಸಿದರು.
ನಗರದ ವಾರ್ಡ್ಗಳ ಅಭಿವೃದ್ಧಿಗಾಗಿ ಕೆಕೆಆರ್ಡಿಬಿ ಅನುದಾನದಡಿ ಕಳೆದ ವರ್ಷ ಪ್ರತಿ ವಾರ್ಡ್ಗೆ ರೂ. 20 ಲಕ್ಷ ನೀಡಲಾಗಿದ್ದು, ಈ ಬಾರಿ ರೂ. 25 ಲಕ್ಷಕ್ಕೆ ಹೆಚ್ಚಿಸಲಾಗಿದೆ. ವಾರ್ಡ್ಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ 12ನೇ ವಾರ್ಡ್ನಲ್ಲಿ 72 ಮನೆಗಳನ್ನು ನಿರ್ಮಿಸಲಾಗಿದ್ದು, ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ 50,000 ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.
ಕೊಪ್ಪಳದಲ್ಲಿ ಶಿಕ್ಷಣ ಮತ್ತು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಹಾಸ್ಟೆಲ್ಗಳು, ಮೊರಾರ್ಜಿ ದೇಸಾಯಿ ಶಾಲೆಗಳು, ಅಂಗನವಾಡಿಗಳು, ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಆದ್ಯತೆ ನೀಡಲಾಗಿದೆ. ಜೊತೆಗೆ ಸಿಂಗಟಾಲೂರು ಏತ ನೀರಾವರಿ, ನವಲಿ ಬ್ಯಾರೇಜ್ ಸೇರಿದಂತೆ 1,100 ಕೋಟಿ ರೂ. ವೆಚ್ಚದಲ್ಲಿ ಸುಮಾರು 1 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಐತಿಹಾಸಿಕ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ನಗರದ ವಾರ್ಡ್ಗಳ ಅಭಿವೃದ್ಧಿಗಾಗಿ ಕೆಕೆಆರ್ಡಿಬಿ ಅನುದಾನದಡಿ ಕಳೆದ ವರ್ಷ ಪ್ರತಿ ವಾರ್ಡ್ಗೆ ರೂ. 20 ಲಕ್ಷ ನೀಡಲಾಗಿದ್ದು, ಈ ಬಾರಿ ರೂ. 25 ಲಕ್ಷಕ್ಕೆ ಹೆಚ್ಚಿಸಲಾಗಿದೆ. ವಾರ್ಡ್ಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ 12ನೇ ವಾರ್ಡ್ನಲ್ಲಿ 72 ಮನೆಗಳನ್ನು ನಿರ್ಮಿಸಲಾಗಿದ್ದು, ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ 50,000 ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ವಿವರಿಸಿದರು.
ಈ ಸಂಧರ್ಭದಲ್ಲಿ ಮಾಜಿ ಜಿ. ಪಂ ಸದಸ್ಯರಾದ ಎಸ್ ಬಿ ನಾಗರಳ್ಳಿ, ಕೊಪ್ಪಳ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್ ಮಾಜಿ ಜಿ. ಪಂ ಸದಸ್ಯರುಗಳಾದ ಗೂಳಪ್ಪ ಹಲಿಗೇರಿ, ಗವಿಸಿದ್ದಪ್ಪ ಕರಡಿ,ಮಾಜಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷಾ, ಮಾಜಿ ನಗರಸಭೆ ಸದಸ್ಯರುಗಳಾದ ರಾಜಶೇಖರ್ ಆಡೂರ್, ಮುತ್ತುರಾಜ್ ಕುಷ್ಟಗಿ, ಗುರುರಾಜ್ ಹಲಿಗೇರಿ, ಸಿದ್ದು ಮ್ಯಾಗೇರಿ, ಯಲ್ಲಮ್ಮ ರಮೇಶ ಗಿಣಗೇರಿ, ಪರಶುರಾಮ್ ಮ್ಯಾದರ್,ಉಮಾ ಪಾಟೀಲ್,ವಿರುಪಾಕ್ಷಪ್ಪ ಮೋರನಾಳ, ಅರುಣ್ ಅಪ್ಪುಶೆಟ್ಟಿ,ಸೈಯದ್ ಮಹೆಬೂಬ್ ಹುಸೈನ್,ಸೋಮಶೇಖರ್ ಹಿಟ್ನಾಳ ಶರಣಪ್ಪ ಸಜ್ಜನ್, ರವಿ ಕುರ್ಗೋಡ್, ಯಮನೂರಪ್ಪ ನಾಯಕ್, ರಾಮಣ್ಣ ಹದ್ದಿನ್, ಖಲೀಲ್ ಅಹ್ಮದ್, ಹಾಜಿ, ಮಾನ್ವಿ ಪಾಷಾ, ಸಯ್ಯದ್ ನಾಸಿರ್ ಹುಸೈನ್,ಮಲ್ಲು ಪೂಜಾರ್, ಅಕ್ಬರ್ ಪಾಷಾ ಪಲ್ಟಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ ನಗರದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ನೆರವೇರಿಸಿದ ನಂತರ ಮುಖಂಡರು ಶಾಸಕರನ್ನು ಸನ್ಮಾನಿಸಿದರು. Koppal MLA K Raghavendra Hitnal
Comments are closed.