ಭೋವಿ ಸಮುದಾಯದ ಅಭಿವೃದ್ಧಿ ಯೋಜನೆಗಳ ಅನುಷ್ಟಾನಕ್ಕೆ ಒತ್ತು ನೀಡಿ: ರಾಮಪ್ಪ ಎಂ.
: ಭೋವಿ ಸಮುದಾಯದ ಜನರ ಅಭಿವೃದ್ಧಿಗಾಗಿ ಇರುವ ಯೋಜನೆಗಳ ಅನುಷ್ಟಾನಕ್ಕೆ ವಿಶೇಷ ಒತ್ತು ನೀಡಬೇಕೆಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಎಂ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಭೋವಿ ಸಮುದಾಯದ ಜನರ ಭೋವಿ ಸಮುದಾಯದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಮೂಲಕ ಜಾರಿಗೊಳಿಸಲಾಗುತ್ತಿದೆ. ಸರ್ಕಾರದ ಎಲ್ಲ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಇದರ ಜೊತೆಗೆ ಸಮುದಾಯದ ಜನರ ಸಮಸ್ಯೆಗಳಿಗೆ ಅತಿತುರ್ತಾಗಿ ಸ್ಪಂದಿಸಬೇಕು ಎಂದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುವ ಸ್ವಯಂ ಉದ್ಯೋಗ, ಉದ್ಯಮಶೀಲತಾ, ಗಂಗಾ ಕಲ್ಯಾಣ, ಮೈಕ್ರೋ ಕ್ರೆಡಿಟ್ ಹಾಗೂ ಭೂ ಒಡೆತನ ಸೇರಿದಂತೆ ಇತರೆ ಯೋಜನೆಗಳ ಸೌಲಭ್ಯವು ಸಮುದಾಯದ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಒದಗಿಸಬೇಕು. ಸಾಲಸೌಲಭ್ಯ ಯೋಜನೆಗಳಡಿ ಸೂಕ್ತ ಬ್ಯಾಂಕಿಂಗ್ ಸೇವೆ ಕಲ್ಪಿಸಿ ಕೊಡಲು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ನಿಗದೊಂದಿಗೆ ಸಹಕರಿಸಬೇಕು. ಗಂಗಾಕಲ್ಯಾಣ ಯೋಜನೆಯಡಿ ಬೊರ್ವೇಲ್‌ಗಳಿಗೆ ಅಗತ್ಯ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿಕೊಡಲು ಜೆಸ್ಕಾಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ನಿಗದಿತ ಗುರಿಯಂತೆ ಯೋಜನೆಗಳವಾರು ಪ್ರಗತಿ ಸಾಧಿಸಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಿಗಮದ ವಿವಿಧ ಯೋಜನೆಗಳ ಪ್ರಗತಿ ಕುರಿತು ಸಭೆಯಲ್ಲಿ ಸಮಗ್ರವಾಗಿ ಪರಿಶೀಲನೆ ನಡೆಸಿದ ರಾಮಪ್ಪ ಎಂ ಅವರು, ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯಗಳನ್ನು ತಲುಪಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಭೋವಿ ಸಮುದಾಯದ ಜನರು ನಿಗಮದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಅವರು ಸಲಹೆ ನೀಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರಾದ ಎನ್.ಪುಷ್ಪಲತಾ ಅವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿಯ ಜಿ.ಎಂ ಶಿವಸ್ವಾಮಿ, ಕೊಪ್ಪಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ನಿರ್ಮಲಾ ಎನ್.ಕೆ., ಸಹಾಯಕ ಆಯುಕ್ತರಾದ ಮಹೇಬೂಬ್ ಜೀಲಾನಿ, ಜಿ.ಪಂ ಉಪ ಕಾರ್ಯದರ್ಶಿಗಳಾದ ಟಿ.ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಅಜ್ಜಪ್ಪ ಸೂಗಲದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಮರೇಶ ಹಾವಿನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಾಗಮಣಿ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಮಾರುತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.
Comments are closed.