ಗೌರಿ-ಗಣೇಶ ಹಬ್ಬ: ಜಿಲ್ಲೆಯಲ್ಲಿ ಸೆ. 22, 24, 26 & 28ರಂದು ಮದ್ಯ ಮಾರಾಟ ನಿಷೇಧ

0

Get real time updates directly on you device, subscribe now.

: 2026ನೇ ಸಾಲಿನ ಗೌರಿ-ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಪ್ಟೆಂಬರ್ 22 ರಿಂದ ಸೆ. 28ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟವನ್ನು ನಿಷೇಧಿಸಿ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಗೌರಿ-ಗಣೇಶ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಅಥವಾ ಗಲಾಟೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಗಣಿಸಿ, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅದರಂತೆ ಸೆಪ್ಟೆಂಬರ್ 22, 24 ಮತ್ತು ಸೆ. 26 ರಂದು ಕೊಪ್ಪಳ ಜಿಲ್ಲೆಯಾದ್ಯಂತ ಹಾಗೂ ಸೆ. 28 ರಂದು ಗಂಗಾವತಿ ತಾಲೂಕು ಮತ್ತು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯೊಳಗೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮದ್ಯ ಮಾರಾಟ ನಿಷೇಧ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈ ತಂಡದಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!