
ಕುಷ್ಟಗಿ (ಕೊಪ್ಪಳ ಜಿಲ್ಲೆ): ಕುಷ್ಟಗಿ ತಾಲೂಕು ಪಂಚಾಯಿತಿಯ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ, ಕಮಿಷನ್ ಆಸೆಗೆ ಬಿದ್ದು ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ (ತಾಲೂಕು ಘಟಕ ಕುಷ್ಟಗಿ) ಪದಾಧಿಕಾರಿಗಳು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (CEO) ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ ನಿಯಮಬಾಹಿರವಾಗಿ ಹರಾಜು ಪ್ರಕ್ರಿಯೆ ನಡೆಸಿ ತಾಪಂ ಬೊಕ್ಕಸಕ್ಕೆ ನಷ್ಟ ಉಂಟುಮಾಡಿರುವ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಿ, ಪ್ರಸ್ತುತ ಹರಾಜನ್ನು ಸಂಪೂರ್ಣ ರದ್ದುಗೊಳಿಸಿ ಮರು ಆನ್‌ಲೈನ್ ಟೆಂಡರ್ (Online Tender) ಕರೆಯಬೇಕೆಂದು ಆಗ್ರಹಿಸಲಾಗಿದೆ.
ಆರೋಪ ಎದುರಿಸುತ್ತಿರುವ 7 ಪ್ರಮುಖ ಅಧಿಕಾರಿಗಳು: ಆಗಸ್ಟ್ 29, 2026 ರಂದು ನಡೆದ ಹರಾಜಿನಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಕೆಳಗಿನ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಹೆಸರಿಸಲಾಗಿದೆ: : ಪ್ರಸ್ತುತ ಲೋಪದೋಷಗಳಿಂದ ಕೂಡಿದ ಹಾಗೂ ಭ್ರಷ್ಟಾಚಾರದಿಂದ ನಡೆದಿರುವ ಮಳಿಗೆಗಳ ಟೆಂಡರ್ ಹರಾಜನ್ನು ತಕ್ಷಣವೇ ರದ್ದುಗೊಳಿಸಬೇಕು. ಕೋರ್ಟ್ ಆದೇಶ ಹಾಗೂ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿರುವ ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಭವಿಷ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಎಲ್ಲಾ ಮಳಿಗೆಗಳಿಗೆ ಮರು ಆನ್‌ಲೈನ್ ಟೆಂಡರ್ (Online Tender) ಪ್ರಕ್ರಿಯೆ ನಡೆಸಬೇಕು.
ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆಯ ತಾಲೂಕು ಅಧ್ಯಕ್ಷ ಮರಿಯಪ್ಪ ಹೆಚ್. ಹಕ್ಕಲ್, ಕೊಪ್ಪಳ ಜಿಲ್ಲಾಧ್ಯಕ್ಷ ಸಂತೋಷ ತೋಟದ, ಮಹಿಳಾ ಜಿಲ್ಲಾಧ್ಯಕ್ಷೆ ಬೆಬಿಜಾನ ಜಾತಗಾರ, ತಾಲೂಕು ಉಪಾಧ್ಯಕ್ಷ ಮುತ್ತಣ್ಣ ಹಕ್ಕಲ್ ಹಾಗೂ ಕರ್ನಾಟಕ ಪ್ರಜಾಶಕ್ತಿ ಸಮಿತಿಯ ತಾಲೂಕು ಅಧ್ಯಕ್ಷ ವಿಜಯಕುಮಾರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.