ರೈತರ ಹಿತಕ್ಕಾಗಿ ಮಾಡಿದ ಹೋರಾಟಕ್ಕೆ ಸಿಕ್ಕ ಫಲ – ನವೀನ್ ಗುಳಗಣ್ಣನವರ್
ಕೊಪ್ಪಳ : ಜಿಲ್ಲೆಯಲ್ಲಿ ಮುಂಗಾರು ಮಳೆ

ವಿಫಲವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ ದಿನದಿಂದಲೇ ಭಾರತೀಯ ಜನತಾ ಪಾರ್ಟಿ ರೈತರ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿದೆ ಜಿಲ್ಲೆಯ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಬರಪೀಡಿತ ತಾಲೂಕುಗಳನ್ನು ಘೋಷಿಸಿ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಕಳೆದ ಒಂದು ತಿಂಗಳಿನಿಂದ ರಾಜ್ಯ ಸರ್ಕಾರವನ್ನು ನಿರಂತರವಾಗಿ ಒತ್ತಾಯಿಸಿದ್ದೇವೆ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗನ್ನವರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಗುಳಗನ್ನವರ
ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ ಅಹೋರಾತ್ರಿ ಧರಣಿ, ವಿವಿಧ ಮಂಡಲಗಳಲ್ಲಿ ಪ್ರತಿಭಟನೆ, ರೈತರ ಸಮಸ್ಯೆಗಳ ಕುರಿತು ಮನವಿ ಹಾಗೂ ಸರ್ಕಾರಕ್ಕೆ ನಿರಂತರ ಒತ್ತಡ ತರುವ ಮೂಲಕ ರೈತರ ಧ್ವನಿಯನ್ನು ಸರ್ಕಾರದವರೆಗೆ ತಲುಪಿಸುವ ಕೆಲಸವನ್ನು ಬಿಜೆಪಿ ಮಾಡಿದೆ.
ಇದೀಗ ಕೊಪ್ಪಳ ಜಿಲ್ಲೆಯ ಹಲವು ತಾಲೂಕುಗಳು ಹಂತ ಹಂತವಾಗಿ ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿರುವುದು ಸಂಕಷ್ಟದಲ್ಲಿರುವ ರೈತರಿಗೆ ಸ್ವಲ್ಪಮಟ್ಟಿನ ನೆಮ್ಮದಿ ತಂದಿದೆ.
ಆದರೆ ಬರ ಘೋಷಣೆ ಮಾತ್ರ ಸಾಕಾಗುವುದಿಲ್ಲ.
ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸಮೀಕ್ಷೆ ಪೂರ್ಣಗೊಳಿಸಿ, ಸರ್ಕಾರ ವಿಳಂಬ ಮಾಡದೆ ಅತಿಶೀಘ್ರವಾಗಿ ಸಮರ್ಪಕ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ನಮ್ಮ ಪ್ರಮುಖ ಒತ್ತಾಯವಾಗಿದೆ.
ಇದರ ಜೊತೆಗೆ ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಮತ್ತೊಂದು ಗಂಭೀರ ಸಮಸ್ಯೆ ವಿದ್ಯುತ್ ಪೂರೈಕೆ.
ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಸಮಯದಲ್ಲಿ ಸಮರ್ಪಕ ವಿದ್ಯುತ್ ದೊರೆಯದಿರುವುದು ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಅನಿಯಮಿತ ವಿದ್ಯುತ್ ಕಡಿತ ಹಾಗೂ ಲೋಡ್ ಶೆಡ್ಡಿಂಗ್‌ನಿಂದ ರೈತರ ಪಂಪ್‌ಸೆಟ್‌ಗಳು ಮತ್ತು ನೀರಾವರಿ ವ್ಯವಸ್ಥೆಗೆ ತೊಂದರೆಯಾಗುತ್ತಿದೆ.
ಆದ್ದರಿಂದ ರಾಜ್ಯ ಸರ್ಕಾರವು ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಲೋಡ್ ಶೆಡ್ಡಿಂಗ್ ಸಮಸ್ಯೆಯನ್ನು ಪರಿಹರಿಸಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ಹಾಗೂ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ.
ರೈತರಿಗೆ ಬರ ಪರಿಹಾರ ಸಿಗುವವರೆಗೆ, ಸಮರ್ಪಕ ವಿದ್ಯುತ್ ದೊರೆಯುವವರೆಗೆ ಹಾಗೂ ಅವರ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದನೆ ಸಿಗುವವರೆಗೆ ರೈತರ ಪರವಾದ ನಮ್ಮ ಧ್ವನಿ ಮುಂದುವರಿಯಲಿದೆ.
ರೈತರ ಹಿತವೇ ನಮ್ಮ ಆದ್ಯತೆ.
ರೈತರ ನ್ಯಾಯಸಮ್ಮತ ಹಕ್ಕುಗಳಿಗಾಗಿ ನಮ್ಮ ಹೋರಾಟ ನಿರಂತರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ
ನವೀನಕುಮಾರ್ ಈ ಗುಳಗಣ್ಣವರ
ಹೇಳಿದ್ದಾರೆ.